ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ 
ರಾಜ್ಯ

ತೀವ್ರಗೊಂಡ ಪ್ರತ್ಯೇಕ ಉ.ಕ ರಾಜ್ಯ ಹೋರಾಟ, ಪ್ರತಿಭಟನೆಗೆ ಮಠಾಧೀಶರು, ಸಂಘಟನೆಗಳು ಸಜ್ಜು

ಉತ್ತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಿಟ್ಟು, ಆಕ್ರೋಶ ದಿನೇ ದಿನೇ ಹೆಚ್ಚಾಗುವ ಲಕ್ಷಣ ಕಾಣುತ್ತಿದೆ. ಇಂದು ಬೆಳಗ್ಗೆ ....

ಬೆಳಗಾವಿ/ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಿಟ್ಟು, ಆಕ್ರೋಶ ದಿನೇ ದಿನೇ ಹೆಚ್ಚಾಗುವ ಲಕ್ಷಣ ಕಾಣುತ್ತಿದೆ. ಇಂದು ಬೆಳಗ್ಗೆ ಸುಮಾರು 100ಕ್ಕೂ ಅಧಿಕ ಉತ್ತರ ಕರ್ನಾಟಕದ ಹಲವು ಮಠಗಳ ಮಠಾಧೀಶರು ಮತ್ತು ಅವರ ಬೆಂಬಲಿಗರು ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಪ್ರತಿಭಟನೆ ಸಂದರ್ಭದಲ್ಲಿ ಪ್ರತ್ಯೇಕ ಧ್ವಜ ಹಾರಿಸುವ ಸಿದ್ಧತೆಯಲ್ಲಿ ಕೂಡ ಕೆಲ ಸಂಘಟನೆಗಳು ಇವೆ.

ಹುಬ್ಬಳ್ಳಿ ಮೂಲದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಇದೇ ಗುರುವಾರ ಕರೆ ನೀಡಿರುವ ಉತ್ತರ ಕರ್ನಾಟಕ ಜಿಲ್ಲೆಗಳ ಬಂದ್ ಗೆ ಮಹತ್ವ ಸಿಕ್ಕಿದೆ. ಸುತ್ತಮುತ್ತಲ ಜಿಲ್ಲೆಗಳ ಜನರು ಬಂದ್ ಗೆ ಬೆಂಬಲ ಸೂಚಿಸಿದರೆ ಹೈದರಾಬಾದ್-ಕರ್ನಾಟಕ ಭಾಗದ ಜನರು ಅದನ್ನು ವಿರೋಧಿಸಲು ನಿರ್ಧರಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ತನ್ನ ನಿಲುವನ್ನು ಬದಲಿಸದಿದ್ದರೆ ನಾವು ಸುಮ್ಮನೆ ಕೂರುವುದಿಲ್ಲ ಎನ್ನುತ್ತಾರೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಭೀಮಪ್ಪ ಗಡದ್. ಅವರು ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಧ್ವಜವನ್ನು ಹಾರಿಸಲು ಕೂಡ ಸಿದ್ಧರಾಗಿದ್ದಾರೆ.

ಇದುವರೆಗೆ ಎಲ್ಲಾ ಸರ್ಕಾರಗಳು ಉತ್ತರ ಕರ್ನಾಟಕ ಭಾಗಕ್ಕೆ ಮತ್ತು ದಕ್ಷಿಣ ಕರ್ನಾಟಕ ಭಾಗಗಳಿಗೆ ನೀಡಿರುವ ಧನಸಹಾಯದ ದಾಖಲೆಗಳನ್ನು ಬಿಡುಗಡೆ ಮಾಡಲಿ. ದಕ್ಷಿಣ ಕರ್ನಾಟಕಕ್ಕೆ ಹೆಚ್ಚು ಸರ್ಕಾರದ ಅನುದಾನಗಳು ಸಿಕ್ಕಿವೆ. ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಇಲ್ಲಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video