ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಬಸ್ ನಿಲ್ದಾಣದಲ್ಲಿ ಕಳ್ಳರ ಕೈಚಳಕ, 1.5 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಳವು

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬಳಿಯಿದ್ದ 1.5 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಳವು ಮಾಡುವ ಮೂಲಕ ಹಾಡ ಹಗಲೇ ಕಳ್ಳಲು ಕೈಚಳಕ ಮೆರೆದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ  ಮಹಿಳೆಯ ಬಳಿಯಿದ್ದ 1.5 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಳವು ಮಾಡುವ ಮೂಲಕ ಹಾಡ ಹಗಲೇ ಕಳ್ಳನೊಬ್ಬ ಕೈಚಳಕ ಮೆರೆದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದ ನಿರ್ಮಲಾ  ಮಾಂಗಲ್ಯ ಸರ ಕಳೆದುಕೊಂಡ ನತದೃಷ್ಟೆಯಾಗಿದ್ದಾರೆ. ಹಿರಿಯೂರಿನಿಂದ ರಾಣಿಬೆನ್ನೂರಿಗೆ ಹೊರಟಿದ್ದ ನಿರ್ಮಲಾ  ಕೆಎಸ್‍ಆರ್ ಟಿಸಿ ಬಸ್ಸಿನಲ್ಲಿ  ಪ್ರಯಾಣಿಸುತ್ತಿದ್ದರು. ಬಸ್ ಚಿತ್ರದುರ್ಗ ನಿಲ್ದಾಣ ತಲುಪಿದಾಗ ಕಳ್ಳನೊಬ್ಬ ಬಸ್ಸಿಗೆ ನುಗ್ಗಿ ಸರವನ್ನು ಅಪಹರಿಸಿ ಪರಾರಿಯಾಗಿದ್ದಾನೆ.
ಬಸ್ ನಿಲ್ದಾಣದಲ್ಲಿದ್ದ ಸಿಸಿಟಿವಿ ಕಾರ್ಯನಿರ್ವಹಿಸುತ್ತಿರಲಿಲ್ಲ, ಮೇಲಾಗಿ ನಿಲ್ದಾಣದಲ್ಲಿದ್ದ ಪೋಲೀಸ್ ಔಟ್ ಪೋಸ್ಟ್ ನಲ್ಲಿ ಸಹ ಆ ಸಮಯಕ್ಕೆ ಪೋಲೀಸರಿರಲಿಲ್ಲ.  ಹೀಗಾಗಿ ಕಳ್ಳನಿಗೆ ಕಳವು ಮಾಡಲು ಅನುಕೂಲಕರವಾಗಿತ್ತು.
ಘಟನೆ ಸಂಬಂಧ  ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT