ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪಘಾತದಲ್ಲಿ ಹೆಡ್ ಕಾನ್ಸ್ ಟೇಬಲ್ ಸಾವು

ವೇಗವಾಗಿ ಬಂದ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಚಲಾಯಿಸುತ್ತಿದ್ದ ವೈಯಾಲಿಕಾವಲ್ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಹೆಬ್ಬಾಳ ಮೇಲ್ಸುತುವೆ ಬಳಿ ನಡೆದಿದೆ.

ಬೆಂಗಳೂರು: ವೇಗವಾಗಿ ಬಂದ  ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್  ಚಲಾಯಿಸುತ್ತಿದ್ದ   ವೈಯಾಲಿಕಾವಲ್ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್   ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ  ಹೆಬ್ಬಾಳ ಮೇಲ್ಸುತುವೆ ಬಳಿ ನಡೆದಿದೆ.

ವಡ್ಡರಹಳ್ಳಿ ನಿವಾಸಿ  ದಯಾನಂದ್  ವಿ. ಆರ್.  ಮೃತಪಟ್ಟ ಹೆಡ್ ಕಾನ್ಸ್ ಟೇಬಲ್.   ಕೆಲಸ ಮುಗಿಸಿಕೊಂಡು ದಯಾನಂದ್  ತನ್ನ ಮನೆಗೆ ಹೋಗುವ ಸಂದರ್ಭದಲ್ಲಿ ಸಂಜೆ 7-30 ರ ಸುಮಾರಿನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 ವೇಗವಾಗಿ ಬಂದ ಬಸ್  ದಯಾನಂದ್ ಚಲಾಯಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ದಯಾನಂದ್ ಸ್ವಲ್ಪ ದೂರ ಗಾಳಿಯಲ್ಲಿ ಹಾರಿಹೋಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೆಬ್ಬಾಳ ಸಂಚಾರಿ ಪೊಲೀಸರು ಮೃತದೇಹವನ್ನು  ಮರಣೋತ್ತರ ಪರೀಕ್ಷೆ ಸಾಗಿಸಿದ್ದರು.

 ಈ  ಘಟನೆಯಿಂದಾಗಿ ಮೇಲ್ಸುತುವೆ ಬಳಿ ಕೆಲ ಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.





Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್