ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಗೆ ಬೆಂಬಲ ನೀಡಿರುವ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸಿದವು.
ಶಿವಾನಂದ ವೃತ್ತದಲ್ಲಿ ರಸ್ತೆ ತಡೆ ನಡೆಯಲು ಪ್ರಯತ್ನಿಸಿದ ಪ್ರತಿಭಟನಾಕಾರರನ್ನು ಹೈ ಗ್ರೌಂಡ್ ಪೊಲೀಸರು ವಶಕ್ಕೆ ಪಡೆದುಕೊಂಡರು.