ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗ; ಜಂಗ್ಲಿ ಕೆರೆಯಲ್ಲಿ ಈಜಲು ಹೋದ ಬಾಲಕರು ನೀರುಪಾಲು

ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಶಿವಮೊಗ್ಗದಲ್ಲಿ ಭಾನುವಾರ ನಡೆದಿದೆ.

ಶಿವಮೊಗ್ಗ: ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ಶಿವಮೊಗ್ಗದಲ್ಲಿ ಭಾನುವಾರ ನಡೆದಿದೆ.
ಶಿವಮೊಗ್ಗದ ತಮ್ಮಡಿಹಳ್ಳಿ ಗ್ರಾಮದ ಜಂಗ್ಲಿ ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲಾಗಿದ್ದಾರೆ. ಸ್ಥಳೀಯರು ತಿಳಿಸಿರುವಂತೆ ಗ್ರಾಮದ ನಿವಾಸಿಗಳಾದ ವಸಂತ್​, ಚಿರಂತ್​, ಅಜಯ್ ಮೃತಪಟ್ಟವರು ಎಂದು ತಿಳಿದುಬಂದಿದೆ.
ಭಾನುವಾರ ಮೂವರೂ ಬಾಲಕರು ಕೆರೆಗೆ ಈಜಾಡಲು ಹೋಗಿದ್ದರು. ಜೋರಾಗಿ ಮಳೆ ಬಂದಿದ್ದರಿಂದ ಕೆರೆಯಲ್ಲಿ ನೀರಿನ ಹರಿವು ಹೆಚ್ಚಿತ್ತು. ಆಳ ತಿಳಿಯದೆ ಕೆರೆಗೆ ಇಳಿದ ಬಾಲಕರು ನಿಯಂತ್ರಣ ಕಳೆದುಕೊಂಡು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇದೇ ತಮ್ಮಡಿಹಳ್ಳಿ ಗ್ರಾಮದಲ್ಲಿ ಮದುವೆ ಇದ್ದ ಕಾರಣ ಊರಿನ ಜನರು ಅಲ್ಲಿ ಸೇರಿದ್ದರು. ಹೀಗಾಗಿ ಬಾಲಕರ ರಕ್ಷಣೆಗೆ ಯಾರೂ ಇರಲಿಲ್ಲ ಎನ್ನಲಾಗಿದೆ. 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ