ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಉಗ್ರ ನಿಗ್ರಹ ಕಾಯ್ದೆಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲು ಸಾಧ್ಯತೆ

ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿ ವಿರುದ್ಧ ಉಗ್ರ ನಿಗ್ರಹ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ...

ಬೆಂಗಳೂರು: ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿ ವಿರುದ್ಧ ಉಗ್ರ ನಿಗ್ರಹ ಕಾಯ್ದೆಯಡಿಯಲ್ಲಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಆರೋಪಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಇದು ಭಾರತದ ಭಾರತದ ಸಾರ್ವಭೌಮತ್ವಕ್ಕೆ ಹಾಗೂ ಪ್ರಾದೇಶಿಕ ಸಮಗ್ರತೆ ಧಕ್ಕೆಯುಂಟು ಮಾಡಿದಂತಾಗಿದೆ. ಇಂತಹ ಪ್ರಕರಣಗಳು ಭಯೋತ್ಪಾದನೆ, ನಕ್ಸಲ್ ಹಾಗೂ ಇತರೆ ಅಪರಾಧಗಳಿಗೆ ಸಂಬಂಧಿಸಿದಂತಾಗಿರುತ್ತದೆ. 
ಭಾರತದ ಸಾರ್ವಭೌಮತ್ವಕ್ಕೆ ಹಾಗೂ ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯುಂಟು ಮಾಡುವವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಯುಎಪಿ)ಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಬಹುದಾಗಿದೆ. ಗೌರಿ ಹತ್ಯೆ ಪ್ರಕರಣದ ಆರೋಪಿ ಬಲಪಂಥೀಯ ಸಂಘಟನೆಗಳ ಸಿದ್ಧಾಂತಗಳಿಂದ ಹೆಚ್ಚು ಪ್ರಭಾವಿತರಾಗಿದ್ದಾರೆ. ಹೀಗಾಗಿ ಹಿಂದೂ ಧರ್ಮದ ವಿರುದ್ಧ ಯಾರು ಮಾತನಾಡುತ್ತಾರೋ ಅಂತಹ ಪ್ರಭಾವಿತ ವ್ಯಕ್ತಿಗಳನ್ನು ಹತ್ಯೆ ಮಾಡಲು ಸಂಚು ರೂಪಿಸುತ್ತಾರೆ. ಪ್ರಸ್ತುತ ಆರೋಪಿಗಳ ಉನ್ನತಾಧಿಕಾರಿಗಳು ವಿರುದ್ಧ ಭಾರತೀಯ ದಂಡಸಂಹಿತೆಯ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆಂದು ಎಸ್ಐಟಿ ಉನ್ನತ ಮೂಲಗಳು ಮಾಹಿತಿ ನೀಡಿವೆ. 
ಯುಎಪಿಎ ಕಾಯ್ದೆಯಡಿಯಲ್ಲಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗುವ ಸಾಧ್ಯತೆಗಳಿದ್ದು, ಪ್ರಕರಣ ಬಹಳ ಗಂಭೀರವಾಗಿದೆ, ಹೀಗಾಗಿ ಪ್ರಕರಣ ಸಂಬಂಧ ಸಂಗ್ರಹಿಸಲಾಗಿರುವ ದಾಖಲೆ ಹಾಗೂ ಸಾಕ್ಷ್ಯಾಧಾರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದಂತೆ ಎಸ್ಐಟಿ ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 
ಇನ್ನು ಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರೋಪಿ ನವೀನ್ ಕುಮಾರ್ ಜೈಲಿನಲ್ಲಿದ್ದುಕೊಂಡೇ ತನ್ನ ವಿರುದ್ಧ ಸಾಕ್ಷ್ಯಾ ನುಡಿಯದಂತೆ ವ್ಯಕ್ತಿಯೊಬ್ಬನಿಗೆ ಬೆದರಿಕೆಯೊಡ್ಡಿರುವುದು ಇದೀಗ ಬಹಿರಂಗಗೊಂಡಿದೆ. 
ಬಂಧನಕ್ಕೊಳಗಾಗಿರುವ ನವೀನ್ ಮೇಲೆ ಮೊದಲಿನಿಂದಲೂ ಮಾಹಿತಿ ಸಂಗ್ರಹಿಸಿದ್ದ ವಿಶೇಷ ತನಿಖಾ ತಂಡ ಆತನ ಚಲನವಲನದ ಬಗ್ಗೆ ನಿಗಾ ಇಟ್ಟಿತ್ತು. ಆರೋಪಿ ತನ್ನ ಮೊಬೈಲ್ ಮೂಲಕ ಸಂಘಟನೆಯೊಂದರ ಕಾರ್ಯಕರ್ತನಾಗಿರುವ ಸ್ನೇಹಿತ ಗಿರೀಶ್ ಎಂಬಾತನ ಜೊತೆ ಕೆಲ ವಿಷಯಗಳನ್ನು ಹಂಚಿಕೊಂಡಿದ್ದ. ಪ್ರಕರಣದಲ್ಲಿ ಎಸ್ಐಟಿ ತಂಡ ಆತನಿಂದ ಹೇಳಿಕೆ ಪಡೆದುಕೊಂಡಿದ್ದು, ಪ್ರಮುಖ ಸಾಕ್ಷ್ಯವನ್ನಾಗಿ ಪರಿಗಣಿಸಿದೆ. ಗಿರೀಸ್ ತನ್ನ ವಿರುದ್ಧ ಸಾಕ್ಷ್ಯ ನುಡಿದಿರುವ ಬಗ್ಗೆ ತಿಳಿದ ನವೀನ್ ಕೂಡಲೇ ಗಿರೀಶ್'ಗೆ ಕರೆ ಮಾಡಿದ್ದಾನೆ. 
ಕರೆ ಮಾಡಿ ತನ್ನ ವಿರುದ್ಧ ನೀಡಿರುವ ಹೇಳಿಕೆಯನ್ನು ತಿರುಚಬೇಕು, ಇಲ್ಲದೇ ಹೋದರೆ, ಪರಿಣಾಮ ಸರಿ ಇರುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದಾನೆಂದು ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!