ರಾಜ್ಯ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆಯ ಆರ್ಭಟ; ತಗ್ಗು ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ

Manjula VN
ಬೆಂಗಳೂರು: ನಗರದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಭಾನುವಾರ ಕೂಡ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಮಳೆಯ ಅಬ್ಬರ ಮತ್ತಷ್ಟು ಜೋರಾಗುವ ಸಾಧ್ಯತೆಗಳಿದ್ದು, ನಗರದಲ್ಲಿರುವ ಹಲವು ತಗ್ಗು ಪ್ರದೇಶಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿತ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್ಎನ್ ಡಿಎಂಸಿ) ಅಧಿಕಾರಿಗಳು ಪ್ರವಾಹ ಎಚ್ಚರಿಕೆ ನೀಡಿದ್ದಾರೆ. 
ಹವಾಮಾನ ಇಲಾಖೆಯ ವರದಿಗಳ ಪ್ರಕಾರ ತಗ್ಗು ಪ್ರದೇಶಗಳಾಗಿರುವ ರಾಜರಾಜೇಶ್ವರಿ ನಗರ, ಪೂರ್ವವಲಯ, ದಕ್ಷಿಣ ವಲಯ, ಮಹದೇವಪುರ, ಬೊಮ್ಮನಹಳ್ಳಿಯಲ್ಲಿ ಪ್ರವಾಹ ಎದುರಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ. 
ಪಶ್ಚಿಮವಲಯ ಮತ್ತು ದಾಸನಾಪುರ ವಲಯಗಳಲ್ಲಿ ಮಧ್ಯಮ ಮಟ್ಟದಲ್ಲಿ ಪ್ರವಾಹ ಎದುರಾಗಬಹುದು ಎಂದು ಕೆಎಸ್ಎನ್ ಡಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ. 
ಕಳೆದ ಒಂದು ವಾರದಿಂದ ನಗರದಲ್ಲಿ ಸುಯುತ್ತಿರುವ ಮಳೆಯ ಆರ್ಭದ ಭಾನುವಾರ ಕೂಡ ಜೋರಾಗಿಯೇ ಇತ್ತು. ನಗರದ ಉತ್ತರ ಭಾಗದಲ್ಲಿ ಹೆಚ್ಚಿನ ಮಳೆಯಾಗಿದ್ದು, ನಗರದ ಕೇಂದ್ರ ಭಾಗ ಸೇರಿದಂತೆ ಇನ್ನಿತರೆ ಕಡೆ ಸಾಧಾರಣ ಮಳೆಯಾಗಿದೆ. ಜಿಟಿ-ಜಿಟಿ ಸುರಿದ ಮಳೆಗೆ ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿತ್ತು. 
ಎಂ.ಜಿ. ರಸ್ತೆಯಲ್ಲಿರುವ ಮಹಾತ್ಮ ಗಾಂಧಿ ವೃತ್ತ ಸೇರಿದಂತೆ ಹಲವು ರಸ್ತೆಗಳಲ್ಲಿ ಮೊಣಕಾಲುದ್ದ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. 
SCROLL FOR NEXT