ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ಪಿ.ಎಂ.ನವಾಜ್, ನರೇಂದ್ರ ಪ್ರಸಾದ್ ಅಧಿಕಾರ
ಇಬ್ಬರು ಹೆಚ್ಚುವರಿ ನ್ಯಾಯಾಧೀಶರು ಕರ್ನಾಟಕ ಹೈಕೋರ್ಟ್ ಪೀಠಕ್ಕೆ ಸೋಮವಾರ ಹೊಸದಾಗಿ ಸೇರ್ಪಡೆಯಾಗಿದ್ದಾರೆ.
ಬೆಂಗಳೂರು: ಇಬ್ಬರು ಹೆಚ್ಚುವರಿ ನ್ಯಾಯಾಧೀಶರು ಕರ್ನಾಟಕ ಹೈಕೋರ್ಟ್ ಪೀಠಕ್ಕೆ ಸೋಮವಾರ ಹೊಸದಾಗಿ ಸೇರ್ಪಡೆಯಾಗಿದ್ದಾರೆ.
ಹೈಕೋರ್ಟ್ನ ಸರ್ಕಾರಿ ವಕೀಲ ಎಚ್.ಟಿ ನರೇಂದ್ರ ಪ್ರಸಾದ್ ಹಾಗೂ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಮೊಹಮದ್ ನವಾಜ್ ಅವರು ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದು, ಅವರನ್ನು ಇಂದು ಕೋರ್ಟ್ ಹಾಲ್ 1ರಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ವಕೀಲರ ಸಂಘ ಆತ್ಮೀಯವಾಗಿ ಸ್ವಾಗತಿಸಿತು.
ಕಳೆದ ಶುಕ್ರವಾರ ಪಿ.ಎಂ.ನವಾಜ್, ನರೇಂದ್ರ ಪ್ರಸಾದ್ ನೇಮಕಕ್ಕೆ ಕೇಂದ್ರ ಕಾನೂನು ಸಚಿವಾಲಯದ ಜಂಟಿ ಕಾರ್ಯದರ್ಶಿ ತಾತ್ವಿಕ ಅನುಮೋದನೆ ನೀಡಿದ್ದರು. ಇಬ್ಬರೂ ನ್ಯಾಯಮೂರ್ತಿಗಳು ಇಂದು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.
ಮೊಹಮದ್ ನವಾಜ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರು. ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಪದವಿ ನಂತರ ಬೆಂಗಳೂರಿನ ಎಸ್ಜೆಆರ್ಸಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮದಬೂರಿನ ಎಚ್.ಟಿ ನರೇಂದ್ರ ಪ್ರಸಾದ್, 1993ರಲ್ಲಿ ಮೈಸೂರಿನಲ್ಲಿ ಕಾನೂನು ಪದವಿ ಪಡೆದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.