ಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ
ಬೆಂಗಳೂರು: ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಅದರ ಉತ್ಪನ್ನಗಳಿಗೆ ಶೇ 5ರಷ್ಟು ತೆರಿಗೆ ಹೆಚ್ಚಳ ಮಾಡಲು ಚಿಂತನೆ ನಡೆಸಿರುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಲಮಾ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಕುಮಾರ ಸ್ವಾಮಿ, ಇಂದು ಪರಿಸರ ನಾಶವಾಗುತ್ತಿರುವ ಬಗ್ಗೆ ವಿಶ್ವಮಟ್ಟದಲ್ಲಿ ದೊಡ್ಡ ಚರ್ಚೆಗಳು ನಡೆಯುತ್ತಿವೆ. ಆದರೆ ಅದನ್ನು ಉಳಿಸುವ ಬಗ್ಗೆ ಯಾರೂ ಕಾರ್ಯೋನ್ಮುಖರಾಗುತ್ತಿಲ್ಲ ಎಂದರು.
ಪ್ಲಾಸ್ಟಿಕ್ ಉತ್ಪನ್ನಗಳ ಗುಣಮಟ್ಟದ ಹಾಗೂ ಮಾರಾಟದ ಬಗ್ಗೆ ಪರಿಶೀಲನೆ ಮಾಡಲು ಕಾನೂನು ಇದೆ, ಆದರೆ ಪ್ಲಾಸ್ಟಿಕ್ ಬಳಕೆ ಬಹಳ ವೇಗವಾಗಿ ಬೆಳೆಯುತ್ತಿದೆ. ಸರ್ಕಾರ ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುತ್ತದೆ.ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮೊದಲ ಬಾರಿಗೆ ನೀತಿ ನಿಯಮಗಳನ್ನು ತಂದರು ಎಂದು ಸಿಎಂ ಸ್ಮರಿಸಿದರು.
ಪ್ಲಾಸ್ಟಿಕ್ ನಿಯಂತ್ರಿಸುವ ಉದ್ದೇಶಕ್ಕಾಗಿ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಉತ್ಪನ್ನಗಳನ್ನು ತಯಾರಿಸುವ ಗುಡಿ ಕೈಗಾರಿಕೆಗಳಿಗೆ ಉತ್ತೇಜನ ನೀಡಲಾಗುವುದು
ಅರಣ್ಯ ಬೆಳವಣಿಗೆ ಸಂಬಂಧಿಸಿ ಇಲಾಖೆಗಳು ಬರೀ ಅಂಕಿ ಅಂಶ ಕೊಡುತ್ತವೆ. ಒಂದು ವೇಳೆ ಆ ಪ್ರಕಾರ ಅರಣ್ಯ ಬೆಳೆದಿದ್ದರೆ ಈಗ ಮಳೆ ಪ್ರಮಾಣ, ಹವಾಮಾನದಲ್ಲಿ ತೀವ್ರ ವ್ಯತ್ಯಯ ಏಕೆ ಉಂಟಾಗುತ್ತದೆ’ ಎಂದು ಪ್ರಶ್ನಿಸಿದರು.
ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ. ಅಶ್ವತ್ಥ್ ನಾರಾಯಣ ಮತ್ತು ನಟ ದರ್ಶನ್ ಹಾಗೂ ಮೇಯರ್ ಸಂಪತ್ ರಾಜ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics