ಸಂಗ್ರಹ ಚಿತ್ರ 
ರಾಜ್ಯ

ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ, ಕಡಿಮೆ ದಾಖಲಾತಿ ಇದ್ದರೆ ಶಿಕ್ಷಕರೇ ಜವಾಬ್ದಾರರು!

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಗಳನ್ನು ಹೆಚ್ಚಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹೊಸ ನಿಯಮಗಳನ್ನು ರೂಪಿಸಿದ್ದು, ಇದರಂತೆ ಮಕ್ಕಳನ್ನು ಶಾಲೆಗೆ ಕರೆತರುವ ಹೊಣೆಯನ್ನು ಶಿಕ್ಷಕರ ಹೆಗಲಿಗೆ ಹಾಕಿದೆ...

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಗಳನ್ನು ಹೆಚ್ಚಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹೊಸ ನಿಯಮಗಳನ್ನು ರೂಪಿಸಿದ್ದು, ಇದರಂತೆ ಮಕ್ಕಳನ್ನು ಶಾಲೆಗೆ ಕರೆತರುವ ಹೊಣೆಯನ್ನು ಶಿಕ್ಷಕರ ಹೆಗಲಿಗೆ ಹಾಕಿದೆ. 
ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಹಾಗೂ ಕಡಿಮೆ ದಾಖಲಾತಿಯಿದ್ದರೆ, ಅದಕ್ಕೆ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರೇ ಜವಾಬ್ದಾರರಾಗಿರುತ್ತಾರೆಂದು ಎಂದಿರುವ ಇಲಾಖೆ, ಮಕ್ಕಳನ್ನು ಶಾಲೆಗೆ ಕರೆತರುವಲ್ಲಿ ಶಿಕ್ಷಕರು ವಿಫಲರಾದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. 
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರದ ಮೂಲಕ ನಿರ್ದೇಶನ ನೀಡಿರುವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಶೂನ್ಯ ದಾಖಲಾತಿ ಹಾಗೂ ಕಡಿಮೆ ದಾಖಲಾತಿ ಇರುವ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರೇ ಮಕ್ಕಳನ್ನು ದಾಖಲಿಸಲು ಕಾರ್ಯನಿರ್ವಹಿಸಬೇಕೆಂದು ಹೇಳಿದ್ದಾರೆಂದು ತಿಳಿದುಬಂದಿದೆ. 
ಪ್ರಸಕ್ತ ವರ್ಷ 261 ಪ್ರಾಥಮಿಕ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಇದೆ. ಇಲ್ಲಿ ಒಟ್ಟು 229 ಶಿಕ್ಷಕರು ಕೆಲಸ ಮಾಡುತ್ತಿದ್ದು, ಪಾಠವೇ ಮಾಡದೇ ವೇತನ ಪಡೆಯುತ್ತಿದ್ದಾರೆ. ಇದೇ ರೀತಿ 57 ಪ್ರೌಢ ಶಾಲೆಗಳಲ್ಲಿ 137 ಶಿಕ್ಷಕರು ಕೆಲಸವೇ ಮಾಡದೆ ವೇತ ಪಡೆಯುತ್ತಿದ್ದಾರೆ. 50 ಮಕ್ಕಳಿಗಿಂತ ಕಡಿಮೆ ದಾಖಲಾತಿ ಇದ್ದರೆ, ಅದನ್ನು ಹೆಚ್ಚುವರಿ ಜವಾಬ್ದಾರಿ ಮುಖ್ಯಶಿಕ್ಷಕರು ಮತ್ತು ಶಿಕ್ಷಕರದ್ದಾಗಿರುತ್ತದೆ. ಶೂನ್ಯ ದಾಖಲಾತಿ ಇರುವ ಪ್ರಾಥಮಿಕ ಶಾಲೆಗಳು 25 ಹಾಗೂ ಪ್ರೌಢ ಶಾಲಾ ಶಿಕ್ಷಕರು 50 ಮಕ್ಕಳನ್ನು ಶಾಲೆಗೆ ಸೇರಿಸಿದಿದ್ದರೆ, ಸಿಇಒ ಅಲ್ಲಿನ ಶಿಕ್ಷಕರನ್ನು ಬೇರೆ ಶಾಲೆಗೆ ಮರು ನಿಯೋಜನೆ ಮಾಡಬೇಕೆಂದು ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT