ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ, ಸತೀಶ್ ಜಾರಕಿಹೋಳಿ ಆಪ್ತರಿಂದ ಕಾಂಗ್ರೆಸ್ ಕಛೇರಿ ಬೆಂಬಲಿಗರ ಪ್ರತಿಭಟನೆ
ಬೆಳಗಾವಿ: ಸಚಿವ ಸ್ಥಾನ ಸಿಗದ ಕಾರಣ ಆಕ್ರೋಶಗೊಂಡ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರು ಬೆಳಗಾವಿ ಕ್ಲಬ್ ರಸ್ತೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಛೇರಿ ಎದುರು ದಾಂಧಲೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಶಾಸಕರ ಬೆಂಬಲಿಗರು ಕಾಂಗ್ರೆಸ್ ಕಛೇರಿಯ ಪೀಠೋಪಕರಣಗಳು, ಪಾಟ್ ಗಳು ಹಾಗು ಗಾಜುಗಳನ್ನು ಹಾನಿಗೊಳಿಸಿದ್ಡಾರೆ. ಅಲ್ಲದೆ ರಾಜ್ಯ, ರಾಷ್ಟ್ರೀಯ ನಾಯಕರ ಭಾವಚಿತ್ರಕ್ಕೆ ಹಾನಿ ಮಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಜಾರಕಿಹೋಳಿಯವರನ್ನು ನಿರ್ಲಕ್ಷಿಸಿದೆ ಎಂದು ಅವರು ದೂಷಿಸಿದ್ದಾರೆ.
ಇದಕ್ಕೂ ಮುನ್ನ ಸತೀಶ ಜಾರಕಿಹೊಳಿ ಸಂಸ್ಥಾಪಕ ಅಧ್ಯಕ್ಷರಾಗಿರುವ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಬೆಳಗಾವಿಯ ಚೆನ್ನಮ್ಮ ಸರ್ಕಲ್ ನಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದರು.ಅಲ್ಲಿಂದ ಕಾಂಗ್ರೆಸ್ ಕಛೇರಿಗೆ ತರಳಿ ತಮ್ಮ ಸಿಟ್ಟನ್ನು ಪ್ರದರ್ಶಿಸಿದ ಅವರು ಪಕ್ಷದ ಹಿರಿಯ ನಾಯಕರ ವಿರುದ್ಧ ಹರಿಹಾಯ್ದರು.
ಸಧ್ಯ ಯಾವ ಅಹಿತಕರ ಘಟನೆ ನಡೆಯುವುದನ್ನು ತಪ್ಪಿಸುವ ಸಲುವಾಗಿ ಕಛೇರಿ ಸುತ್ತಲೂ ಬಿಗಿ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.