ಸಂಗ್ರಹ ಚಿತ್ರ 
ರಾಜ್ಯ

ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಎಬ್ಬಿಸಲು ಅಗ್ನಿಶಾಮಕ ಸಿಬ್ಬಂದಿಯ ಮೊರೆ ಹೋದ ಪೋಷಕರು! ಏನಿದು ಘಟನೆ?

ಪೋಷಕರ ಕರೆ ಹಿನ್ನಲೆಯಲ್ಲಿ ಮನೆಯಲ್ಲಿ ಮಲಗಿದ್ದ 12 ವರ್ಷದ ಬಾಲಕಿಯನ್ನು ಎಬ್ಬಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟಿರುವ ವಿಚಿತ್ರ ಘಟನೆ ಮಂಗಳೂರಿನಲ್ಲಿ ನಡೆದಿದೆ...

ಮಂಗಳೂರು: ಪೋಷಕರ ಕರೆ ಹಿನ್ನಲೆಯಲ್ಲಿ ಮನೆಯಲ್ಲಿ ಮಲಗಿದ್ದ 12 ವರ್ಷದ ಬಾಲಕಿಯನ್ನು ಎಬ್ಬಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟಿರುವ ವಿಚಿತ್ರ ಘಟನೆ ಮಂಗಳೂರಿನಲ್ಲಿ ನಡೆದಿದೆ. 
ಮಂಗಳೂರಿನ ಬಿಜೈನಲ್ಲಿರುವ ಅಪಾರ್ಟ್ ಮೆಂಟ್ ವೊಂದರಲ್ಲಿ ಈ ಘಟನೆ ನಡೆದಿದೆ. ಸಂಜೆ 4 ಗಂಟೆ ಸುಮಾರಿಗೆ ಮನೆಗೆ ಬಂದ ಬಾಲಕಿ ಮಲಗಿಕೊಂಡಿದ್ದಾಳೆ. ಕೆಲಸ ನಿಮಿತ್ತ 5 ಗಂಟೆ ಸುಮಾರಿಗೆ ತಾಯಿ ಹೊರಗಡೆ ಹೋಗಿದ್ದು ನಂತರ ಮನೆಗೆ ಮರಳಿದ ತಾಯಿ ಬಾಗಿಲು ಬಡಿದಿದ್ದಾರೆ. ಎಷ್ಟು ಬಡಿದರೂ ಬಾಗಿಲು ತೆಗೆಯದಿದ್ದರಿಂದ ಆಕೆ ಗಂಡನಿಗೆ ಕರೆ ಮಾಡಿ ಕರೆಸಿಕೊಂಡಿದ್ದಾರೆ. ಇಬ್ಬರು ಎಷ್ಟು ಸಲ ಪ್ರಯತ್ನಿಸಿದರು ಸಾಧ್ಯವಾಗಲಿಲ್ಲ. 
ಈ ವೇಳೆ ಪೋಷಕರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಮನೆಗೆ ಬಂದ ಅವರು ನಾನಾ ಪ್ರಯತ್ನಗಳು ಮಾಡಿದ್ದು ಕೊನೆಗೆ ಬಾಲ್ಕನಿಯಿಂದ ಮನೆ ಒಳಗೆ ಹೋಗಿ ಮುಂಭಾಗದ ಬಾಗಿಲನ್ನು ತೆರೆದಿದ್ದಾರೆ. ಒಳ ಬಂದ ಪೋಷಕರು ಮಗಳನ್ನು ಎಬ್ಬಿಸಿದ್ದಾರೆ. ಮಗಳು ಗಾಢವಾಗಿ ನಿದ್ರೆಗೆ ಜಾರಿದ್ದರಿಂದ ಈ ಘಟನೆ ಸಂಭವಿಸಿದ್ದು ಬಾಲಕಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅಗ್ನಿಶಾಮಕ ಮುಖ್ಯಸ್ಥ ಶಿವಶಂಕರ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್