ಎಂಎಂ ಕಲಬುರ್ಗಿ - ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್, ಎಂಎಂ ಕಲಬುರ್ಗಿ ಹತ್ಯೆಗೆ ಬಳಸಿದ್ದು ಒಂದೇ ಗನ್: ವಿಧಿ ವಿಜ್ಞಾನ ವರದಿ

ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಮತ್ತು ಸಂಶೋಧಕ, ಸಾಹಿತಿ ಎಂ.ಎಂ ಕಲಬುರ್ಗಿ ಅವರ...

ಬೆಂಗಳೂರು: ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಮತ್ತು ಸಂಶೋಧಕ, ಸಾಹಿತಿ ಎಂ.ಎಂ ಕಲಬುರ್ಗಿ ಅವರ ಹತ್ಯೆಗೆ ಒಂದೇ ಗನ್ ಬಳಸಲಾಗಿದೆ ಎಂದು ಕರ್ನಾಟಕ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಖಚಿತಪಡಿಸಿದೆ.
ಇಬ್ಬರ ಚಿಂತಕರ ಹತ್ಯೆಗೆ ಸಂಬಂಧಿಸಿದ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ ನೀಡಲಾಗಿದೆ.
ಎರಡು ವರ್ಷಗಳ ಅಂತರದಲ್ಲಿ ನಡೆದಿದ್ದ ಎರಡು ಕೊಲೆ ಪ್ರಕರಣಗಳ ನಡುವಿನ ಸಂಬಂಧದ ಕುರಿತಂತೆ ಹೊರ ಬಂದಿರುವ ಮೊದಲ ಅಧಿಕೃತ ವರದಿ ಇದಾಗಿದೆ.
55 ವರ್ಷದ ಗೌರಿ ಲಂಕೇಶ್ ಹಾಗೂ 77 ವರ್ಷದ ಎಂಎಂ ಕಲಬುರ್ಗಿ ಹತ್ಯೆಗೆ 7.65 ಎಂ ಎಂ ಕ್ಯಾಲಿಬರ್ ಪಿಸ್ತೂಲ್ ಕ್ಯಾಟ್ರಿಡ್ಜ್ ಗಳನ್ನು ಹೊಂದಿದ್ದ ಒಂದೇ ಕಂಟ್ರಿ ಗನ್ ನಿಂದ ಗುಂಡುಗಳನ್ನು ಹಾರಿಸಲಾಗಿದೆ ವಿಧಿ ವಿಜ್ಞಾನ ವರದಿಯಲ್ಲಿ ತಿಳಿಸಲಾಗಿದೆ.
ಗೌರಿ ಲಂಕೇಶ್ ಅವರನ್ನು 2017 ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ಅವರ ನಿವಾಸದಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.
ಎಂ.ಎಂ ಕಲಬುರ್ಗಿ ಅವರನ್ನು 2015 ಆಗಸ್ಟ್ 30ರಂದು ಧಾರವಾಡದ ಕಲ್ಯಾಣ ನಗರದಲ್ಲಿರುವ ಅವರ ನಿವಾಸದಲ್ಲಿ ಗುಂಡಿಟ್ಟು ಕೊಲ್ಲಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!