ಬಿಎಸ್ ಪಾಟೀಲ್ 
ರಾಜ್ಯ

ಮಾಜಿ ಸಚಿವ ಬಿ.ಎಸ್.ಪಾಟೀಲ್ ಸಾಸನೂರ ನಿಧನ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಬಿ.ಎಸ್. ಪಾಟೀಲ್ ಸಾಸನೂರ(87) ಅವರು...

ವಿಜಯಪುರ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಬಿ.ಎಸ್. ಪಾಟೀಲ್ ಸಾಸನೂರ(87) ಅವರು ಭಾನುವಾರ ನಿಧನರಾಗಿದ್ದಾರೆ. 
ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಬಿಎಲ್‍ಡಿಇ ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ ಪಾಟೀಲ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ರಾತ್ರಿ 8.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಬಿ ಎಸ್ ಪಾಟೀಲ ಅವರ ಪುತ್ರ ಸೋಮನಗೌಡ ಪಾಟೀಲ ಸಾಸನೂರ ದೇವರಹಿಪ್ಪರಗಿ ಹಾಲಿ ಬಿಜೆಪಿ ಶಾಸಕರಾಗಿದ್ದಾರೆ. 
ಮೃತರ ಅಂತ್ಯಕ್ರಿಯೆ ಸೋಮವಾರ ಹಿರೂರಿನಲ್ಲಿ ನಡೆಯಲಿದ್ದು ಸಾಸನೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬಸನಗೌಡ ಸಂಗನಗೌಡ ಪಾಟೀಲ್ ಸಾಸನೂರ ಅವರು ಹೂವಿನ ಹಿಪ್ಪರಗಿ ಕ್ಷೇತ್ರದಿಂದ ಒಟ್ಟು ಐದು ಬಾರಿ ಕಾಂಗ್ರೆಸ್ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 
ಕಾಂಗ್ರೆಸ್‍ನ ಶಿಸ್ತಿನ ಸಿಪಾಯಿ ಆಗಿದ್ದರು. ಬಿ.ಎಸ್.ಪಾಟೀಲ್ ಅವರ ತಂದೆ ಸೋಮನಗೌಡ ಪಾಟೀಲ್ ಸಾಸನೂರ ಬಿಜೆಪಿ ಶಾಸಕರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು- ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಕೇಳಿದ CM ಡಿಕೆ ಶಿವಕುಮಾರ್: ವಿಜಯೇಂದ್ರ, ಅಶೋಕ್‌ಗೂ ದೆಹಲಿಗೆ ಬರುವಂತೆ ಆಹ್ವಾನ

'ಫುಟ್‌ಪಾತ್‌ಗೆ ಮತ್ತೆ ಕನ್ನ ಹಾಕಿದ್ರೆ FIR, ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್'; ಕೃಷ್ಣ ಬೈರೇಗೌಡ ಖಡಕ್‌ ಎಚ್ಚರಿಕೆ

Cricket: 'ಜನಪ್ರಿಯತೆಗಿಂತ ನಿರ್ಧಾರ ಮುಖ್ಯ'.. ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ Ajit Agarkar ಮುಂದುವರಿಕೆ ಕುರಿತು ಕೊನೆಗೂ ಮೌನ ಮುರಿದ BCCI!