ಸಾಂದರ್ಭಿಕ ಚಿತ್ರ 
ರಾಜ್ಯ

ಬಿಟ್ಟು ಬಿಟ್ಟು ಸುರಿಯುವ ಮಳೆ: ಬೆಂಗಳೂರಿಗರು ಹೊರಗೆ ಕಾಲಿಡುವಾಗ ಛತ್ರಿ, ರೈನ್ ಕೋಟ್ ಮರೆಯದಿರಿ

ಮೋಡ ಕವಿದ ಗಾಢ ಹವಾಮಾನ ಮತ್ತು ತುಂತುರು ಮಳೆ ಈ ವಾರದಲ್ಲಿ ಬೆಂಗಳೂರಿನಲ್ಲಿ ಸುರಿಯುವ ...

ಬೆಂಗಳೂರು: ಮೋಡ ಕವಿದ ಗಾಢ ಹವಾಮಾನ ಮತ್ತು ತುಂತುರು ಮಳೆ ಈ ವಾರದಲ್ಲಿ ಬೆಂಗಳೂರಿನಲ್ಲಿ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಲವಾದ ನೈರುತ್ಯ ಮುಂಗಾರಿನ ಕಾರಣದಿಂದ ಗುರುವಾರದವರೆಗೆ ಮಳೆ ಸುರಿಯಲಿದ್ದು ಸಾಧಾರಣದಿಂದ ಭಾರೀ ಮಳೆ ಕಳೆದೆರಡು ದಿನಗಳಿಂದ ನಗರದಲ್ಲಿ ಕಂಡುಬರುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ ಬೇರೆಲ್ಲಾ ಜಿಲ್ಲೆಗಳಲ್ಲಿ ಈ ಬಾರಿಯ ಮುಂಗಾರು ಮಾರುತದ ಆರಂಭದಲ್ಲಿ ಹೆಚ್ಚು ಮಳೆ ದಾಖಲಾಗಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಹೆಚ್ಚುವರಿ ಶೇಕಡಾ 81ರಷ್ಟು ಮಳೆಯಾಗಿದ್ದು ಬೆಂಗಳೂರು ನಗರ ಭಾಗದಲ್ಲಿ ಶೇಕಡಾ 14ರಷ್ಟು ಮಳೆ ಕೊರತೆಯಾಗಿದೆ.

ಕಳೆದ ವಾರದಲ್ಲಿ ಬೆಂಗಳೂರು ನಗರದಲ್ಲಿ 10.49 ಮಿಲಿ ಮೀಟರ್ ಮಳೆಯಾಗಿದ್ದು ಸರಾಸರಿ 21.40 ಮಿಲಿ ಮೀಟರ್ ಮಳೆ ಸುರಿದಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹಂಚಿಕೆಯಾಗುವ ಸಾಧ್ಯತೆಯಿದ್ದು ಮಳೆಯ ತೀವ್ರತೆ ಇತರ ಭಾಗಗಳಲ್ಲಿ ಕೂಡ ಇಳಿಕೆಯಾಗುವ ನಿರೀಕ್ಷೆಯಿದೆ.

ಜೂನ್ 1ರಿಂದ 10ರವರೆಗೆ ರಾಜ್ಯದಲ್ಲಿ ಸರಾಸರಿ ಶೇಕಡಾ 71ರಷ್ಟು ಮಳೆ ಬಿದ್ದಿದೆ. ಅತಿ ಹೆಚ್ಚು ಮಳೆ ಉಡುಪಿ ಜಿಲ್ಲೆಯಲ್ಲಿ ದಾಖಲಾಗಿದೆ. ಇಲ್ಲಿ ಸರಾಸರಿ 361 ಮಿಲಿ ಮೀಟರ್ ಮಳೆಯಾಗಿದೆ.

ಕಳೆದ ವರ್ಷ ಇಲ್ಲಿ ಇದೇ ಸಮಯಕ್ಕೆ 254 ಮಿಲಿ ಮೀಟರ್ ಮಳೆ ಸುರಿದಿತ್ತು.
ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗಗಳಲ್ಲಿ ಸರಾಸರಿಗಿಂತ ದುಪ್ಪಟ್ಟು ಹೆಚ್ಚು ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ 59.63 ಮಿಲಿ ಮೀಟರ್ ಮಳೆಯಾಗಿದ್ದು ಇದೇ ಸಂದರ್ಭದಲ್ಲಿ ಇಲ್ಲಿ ಸರಾಸರಿ 31.90 ಮಿಲಿ ಮೀಟರ್ ಮಳೆ ಸುರಿಯುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!