ಬೆಂಗಳೂರು: ಗಾರ್ಮೆಂಟ್ಸ್ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜೂ.18 ರಂದು ಸಭೆ ಕರೆದಿದ್ದಾರೆ.
ಗಾರ್ಮೆಂಟ್ ಹಾಗೂ ಜವಳಿ ನೌಕರರ ಒಕ್ಕೂಟದ ಪ್ರತಿನಿಧಿಗಳ ಜೊತೆ ಮಾತನಾಡಿರುವ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಕನಿಷ್ಠ ವೇತನವೂ ಸೇರಿದಂತೆ ನೌಕರರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ.
ನೌಕರರು ಹಾಗೂ ಉತ್ಪಾದಕರು ಇಬ್ಬರಿಗೂ ಸೂಕ್ತವಾದ ನಿರ್ಧಾರ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.