ಶಾಲಿನಿ ರಜನೀಶ್ 
ರಾಜ್ಯ

ಕರ್ನಾಟಕದ 101 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ತೀರ್ಮಾನ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಬೇಕೆನ್ನುವ ಪೋಷಕರ ಬಹುಕಾಲದ ಒತ್ತಾಯ ಕಡೆಗೂ ಪೂರ್ಣಗೊಳ್ಳುತ್ತಿದೆ.

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಬೇಕೆನ್ನುವ ಪೋಷಕರ ಬಹುಕಾಲದ ಒತ್ತಾಯ ಕಡೆಗೂ ಪೂರ್ಣಗೊಳ್ಳುತ್ತಿದೆ. ರಾಜ್ಯದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಒಟ್ಟು 101 ಪೂರ್ವ ಪ್ರಾಥಮಿಕ ತರಗತಿಗಳನ್ನು ತೆರೆಯಲು ನಿರ್ಧರಿಸಿದೆ.
ಇದೇ ವರ್ಷ ರಾಜ್ಯದ 13 ಶೈಕ್ಷಣಿಕ ಜಿಲ್ಲೆಗಳ 101 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಸೇರಿದಂತೆ  ಪೂರ್ವ ಪ್ರಾಥಮಿಕ ತರಗತಿಗಳನ್ನು ಪರಿಚಯಿಸಲಾಗುತ್ತದೆ.
"ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ತೆರೆದರೆ ಒಂದನೇ ತರಗತಿಗೆ ಸರ್ಕಾರಿ ಶಾಲೆಗೆ ಸೇರುವ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಬಹುದು ಎನ್ನುವುದು ನಮ್ಮ ನಿರೀಕ್ಷೆಯಾಗಿದೆ" ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದ್ದಾರೆ.
"ಪೂರ್ವ-ಪ್ರಾಥಮಿಕ ತರಗತಿಗಳಿಗೆ ಭಾರೀ ಬೇಡಿಕೆಯಿದೆ. ಹಲವಾರು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳು ಮತ್ತು ಶಿಕ್ಷಕರ ಸಂಘಗಳು ಈ ಸಂಬಂಧ ಬೇಡಿಕೆ ಇಟ್ಟಿದೆ.ಇವರುಗಳು ತಾವು ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರ ವೆಚ್ಚ ಭರಿಸುವ ಭರವಸೆಯನ್ನೂ ಸಹ ನಿಡಿದ್ದಾರೆ. ಇದೀಗ ಪೂರ್ವ ಪ್ರಾಥಮಿಕ ತರಗತಿಗೆ ಪಠ್ಯಕ್ರಮ ಸಹ ಸಿದ್ದವಾಗಿದೆ. ರಾಜ್ಯದಲ್ಲಿ ತೆರೆಯಲಾಗುವ 101 ಶಾಲಾ ತರಗತಿಗಳಿಗೆ ಒಂದು ಶಾಲೆಗೆ ಒಬ್ಬರಂತೆ ಶಿಕ್ಷಕರ ನೇಮಕ ಮಾಡಲಾಗುತ್ತದೆ" ಅವರು ವಿವರಿಸಿದರು.
ಸರ್ಕಾರಿ ಶಾಲೆ ಸಮೀಪದಲ್ಲಿರುವ ಅಂಗನವಾಡಿಗಳನ್ನು ಇದರಲ್ಲಿ ವಿಲೀನಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದ ನಿರ್ದೇಶಕಿ ಶಾಲಿನಿ ರಜನೀಶ್ "ನಾವು ಈಗಾಗಲೇ 5,000 ಕ್ಕಿಂತ ಹೆಚ್ಚು ಅಂಗನವಾಡಿಗಳನ್ನು ಗುರುತಿಸಿದ್ದೇವೆ, ಅದನ್ನು ಪ್ರಾಥಮಿಕ ಶಾಲೆಗಳೊಂದಿಗೆ ಸಂಯೋಜಿಸಲು ನಿರ್ಧರಿಸಲಾಗುವುದು" ಎಂದು ಹೇಳಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ