ಹುಬ್ಬಳ್ಳಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗಬೇಕು. ಸದ್ಯ ಎಸ್ಐಟಿ ಅಧಿಕಾರಿಗಳು ಕೆಲವರನ್ನು ಬಂಧಿಸಿದ್ದಾರೆ. ಇನ್ನು ಅವರ ಮೇಲೆ ತನಿಖೆಯಾಗಬೇಕು. ತನಿಖೆ ಸಂತರ ತಪ್ಪಿತಸ್ಥರು ಯಾರೆಂದು ಗೊತ್ತಾಗಲಿದೆ. ತಪ್ಪು ಯಾರೇ ಮಾಡಿದ್ದರು ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.
ಇನ್ನು ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ಒಂದಾಗೇ ಇದ್ದೇವೆ. ಬೇರೆಯಾಗುವ ಮಾತೆಲ್ಲಿಂದ ಬಂತು. ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ಮಾಡಿದವರನ್ನು ಜನ ಮನೆಗೆ ಕಳಿಸಿದ್ದಾರೆ ಎಂದು ಟೀಕಿಸಿದರು.