ಕೋಳೂರು(ಬಳ್ಳಾರಿ): ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಗು ಸೇರಿ ಐವರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಕೋಳೂರು ಬಳಿ ಸಂಭವಿಸಿದೆ.
ಕೆಎಸ್‌ಆರ್‌ಟಿಸಿ ಬಸ್ ಸಿರಗುಪ್ಪ ಕಡೆ ತೆರಳುತ್ತಿತ್ತು. ಕಾರು ಬಳ್ಳಾರಿಯತ್ತ ಬರುತ್ತಿದಾಗ ಕೋಳೂರು ಬಳಿ ಮುಖಾಮುಖಿ ಡಿಕ್ಕಿಯಾಗಿದೆ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪೊಲೀಸರು ಸ್ಥಳೀಯರೊಂದಿಗೆ ಸೇರಿ ಕಾರಿನಡಿ ಸಿಲುಕಿದ್ದ ದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು. ಸ್ಥಳಕ್ಕೆ ಕುರುಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.