ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ತಂಬಾಕು ಚಟ ಬಿಡು ಎಂದಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣು

ತಂಬಾಕು ಜಗಿಯುವ ಚಟ ಬಿಡುವಂತೆ ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ...

ಬೆಂಗಳೂರು; ತಂಬಾಕು ಜಗಿಯುವ ಚಟ ಬಿಡುವಂತೆ ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. 
ಆಸೀಫ್ ವುಲ್ಲಾ (19) ಮೃತ ಯುವಕನಾಗಿದ್ದಾನೆ. ಯುವಕ ಅರ್ಧಕ್ಕೆ ಕಾಲೇಜು ವಿದ್ಯಾಭ್ಯಾಸ ಮೊಟಕುಗೊಳಿಸಿದ್ದು, ಫ್ಯಾಬ್ರಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. 
ಆಸೀಫ್ ವುಲ್ಲಾ ತಂಬಾಕು ಸೇವನೆ ಚಟಕ್ಕೆ ಒಳಗಾಗಿದ್ದ. ತಂಬಾಕು ಚಟ ಒಳ್ಳೆಯದಲ್ಲ ಎಂದು ಆಸೀಫ್ ತಂದೆ ಎಸ್.ಎಂ. ಅಬ್ದುಲ್ ಅವರು ಪುತ್ರನಿಗೆ ಬುದ್ಧಿ ಮಾದು ಹೇಳಿದ್ದಾರೆ. ಕೆಟ್ಟ ಚಟ ಬಿಡದ ಯುವಕ ಪೋಷಕರೊಂದಿಗೆ ವಾದ ಮಾಡುತ್ತಿದ್ದ. 
ಪೋಷಕರು ಶನಿವಾರ ರಂಜಾನ್ ಹಿನ್ನಲೆಯಲ್ಲಿ ಸಂಬಂಧಿಕರೊಬ್ಬ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಶನಿವಾರ ರಾತ್ರಿ 8.30ರ ಸುಮಾರಿಗೆ ಮನೆಗೆ ವಾಪಸ್ ಆದಾಗ ಪ್ರಕರಣ ಬೆಳಗಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ