ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕ್ರಿಕೆಟ್ ಆಡುವ ವಿಚಾರಕ್ಕೆ ಆದ ಜಗಳ ಕೊಲೆಯಲ್ಲಿ ಅಂತ್ಯ!

ಕ್ರಿಕೆಟ್ ಆಡುವ ವಿಚಾರಕ್ಕೆ ಜಗಳ ನಡೆದು ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾಲಕ್ಷ್ಮೀ ಲೇ ಔಟ್ ಠಾಣಾ ಸರಹದ್ದಿನ ಜೆ.ಸಿ.ನಗರದಲ್ಲಿ ಭಾನುವಾರ ಸಂಜೆ ನಡೆದಿದೆ...

ಬೆಂಗಳೂರು: ಕ್ರಿಕೆಟ್ ಆಡುವ ವಿಚಾರಕ್ಕೆ ಜಗಳ ನಡೆದು ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಹಾಲಕ್ಷ್ಮೀ ಲೇ ಔಟ್ ಠಾಣಾ ಸರಹದ್ದಿನ ಜೆ.ಸಿ.ನಗರದಲ್ಲಿ ಭಾನುವಾರ ಸಂಜೆ ನಡೆದಿದೆ. 
ಮಹಾಲಕ್ಷ್ಮೀ ಲೇ ಔಟ್'ನ ಶ್ರೀರಾಮನಗರದ ಮಣಿಕಂಠ ಅಲಿಯಾಸ್ ದೊಟ್ಟಕಾಟು (22) ಮೃತ ಯುವಕನಾಗಿದ್ದಾನೆ. 
ಮಣಿಕಂಠ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಈತ ಮಹಾಲಕ್ಷ್ಮೀ ಲೇ ಔಟ್ ಠಾಣಾ ವ್ಯಾಪ್ತಿಯ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಭಾನುವಾಹ ಮಧ್ಯಾಹ್ನ 4 ಗಂಟೆ ಸುಮಾರಿಗೆ ಸ್ನೇಹಿತರೊಂದಿಗೆ ಗೆಳೆಯರ ಬಳಗ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದ. ಕ್ರಿಕೆಟ್ ಪಂದ್ಯದ ವಿಚಾರವಾದಿ ಎದುರಾಳಿ ತಂಡದ ಯುವಕನೊಬ್ಬನ ಜೊತೆಗೆ ಜಗಳವಾಡಿ ಆತನ ಮೇಲೆ ಹಲ್ಲೆ ನಡೆಸಿದ್ದ. 
ಮಣಿಕಂಠನಿಂದ ಹಲ್ಲೆಗೊಳಗಾಗಿದ್ದ ಯುವಕ ಹಲ್ಲೆಗೊಳಗಾದ ಬಗ್ಗೆ ತನ್ನ ಸ್ನೇಹಿತರಿಗೆ ಹೇಳಿದ್ದ. ಸಂಜೆ 6 ಗಂಟೆ ಸುಮಾರಿಗೆ ಜೆ.ಸಿ.ನಗರದಲ್ಲಿ ಮಣಿಕಂಠನ ಮೇಲೆ 4-5 ದುಷ್ಕರ್ಮಿಗಳ ತಂಡ ಎರಗಿ ಹಲ್ಲೆ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಮಣಿಕಂಠ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. 
ಘಟನೆ ಸಂಬಂಧ ಕೆಲಸವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಸ್ಥಳೀಯ ಸಿಸಿಟಿವಿಗಳನ್ನು ವಶಕ್ಕೆ ಪಡೆಗುಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಮಹಾಲಕ್ಷ್ಮೀ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉತ್ತರಾಖಂಡ: ಚಮೋಲಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ; 7 ಕಾರ್ಮಿಕರು ಸಾವು, 14 ಜನರಿಗೆ ಗಾಯ, 22 ಮಂದಿ ರಕ್ಷಣೆ-Video

Iran ಮುಗಿಸಲು ಅಮೆರಿಕ ಮಾಸ್ಟರ್ ಪ್ಲ್ಯಾನ್: ಜಾಗತಿಕ ಇತಿಹಾಸದಲ್ಲೇ ಹಿಂದೆಂದೂ ಕಾಣದ ಭೀಕರ 'ಆರ್ಥಿಕ ಯುದ್ಧ' ಘೋಷಣೆ!

'ಸಮಯವಿಲ್ಲ, ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ, ಧ್ವಜಾರೋಹಣ ನನಗೆ ಬೇಡ': ಜಮೀರ್ ಅಹ್ಮದ್ ಸಿಎಂಗೆ ಪತ್ರ

ಸ್ವಾತಂತ್ರ್ಯೋತ್ಸವಕ್ಕೆ ಸಿಲಿಕಾನ್ ಸಿಟಿ ಸಜ್ಜು: ವಿಧಾನಸೌಧದ ಮುಂದೆ ‘ಫ್ರೀಡಂ ಹಬ್ಬ’ಕ್ಕೆ ಭರದ ಸಿದ್ಧತೆ, 18 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ..!

ದೇಶ ವಿಭಜನೆಯ ಸಂತ್ರಸ್ತರನ್ನು ಸ್ಮರಿಸಿದ ಪ್ರಧಾನಿ ಮೋದಿ; ಸಾಮರಸ್ಯ, ಸಹೋದರತ್ವಕ್ಕೆ ಕರೆ