ಬಿ. ಜೆ. ಪುಟ್ಟಸ್ವಾಮಿ 
ರಾಜ್ಯ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಬಿ. ಜೆ. ಪುಟ್ಟಸ್ವಾಮಿ ರಾಜೀನಾಮೆ

ಇತ್ತೀಚಿಗೆ ನಡೆದ ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಿಂದ ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿರುವ ವಿಧಾನಪರಿಷತ್ ಮಾಜಿ ಸದಸ್ಯ ಪುಟ್ಟಸ್ವಾಮಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ .

ಬೆಂಗಳೂರು: ಇತ್ತೀಚಿಗೆ ನಡೆದ ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಿಂದ ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿರುವ ವಿಧಾನಪರಿಷತ್ ಮಾಜಿ ಸದಸ್ಯ  ಪುಟ್ಟಸ್ವಾಮಿ ಬಿಜೆಪಿ   ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ .

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿದ್ದರೂ  ಮತ್ತೆ ವಿಧಾನಪರಿಷತ್  ಗೆ ಮರು ಆಯ್ಕೆ  ಮಾಡದೆ ಇರುವುದರಿಂದ  ಪುಟ್ಟಸ್ವಾಮಿ ಅಸಮಾಧಾನಗೊಂಡು ರಾಜೀನಾಮೆ  ಸಲ್ಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಯಾವ ಕಾರಣಕ್ಕೆ ತಮ್ಮಗೆ ವಿಧಾನಪರಿಷತ್ ಸ್ಥಾನಕ್ಕೆ  ನಾಮನಿರ್ದೇಶನ ಮಾಡಲಿಲ್ಲ ಎಂಬುದು ಗೊತ್ತಿದೆ.  ವಿಧಾನಪರಿಷತ್ತಿನ ನಾಯಕನಾಗಲೂ ನೀವೂ ನನ್ನಗೆ ಸಲಹೆ ನೀಡಿದ್ರೀ. ಆದರೆ. ಏಕೆ ನಿಮ್ಮ ಮಾತನ್ನು  ಉಳಿಸಿಕೊಳ್ಳಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ ಎಂದು  ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಪುಟ್ಟಸ್ವಾಮಿ ಪ್ರಶ್ನಿಸಿದ್ದಾರೆ.

 ಹಿಂದಿನ ಸರ್ಕಾರದಲ್ಲಿನ ಹಗರಣಗಳನ್ನು ಬೆಳಕಿಗೆ ತರಲು ಶ್ರಮಪಟ್ಟಿದ್ದು, ಹಲವು ಸವಾಲುಗಳನ್ನು ಎದುರಿಸಿದ್ದೇನೆ. ಆದರೆ. ತಮ್ಮ ಮೇಲೆ ದಾಳಿ ಆದಾಗ ಯಾರೂ ಕೂಡಾ ಸಹಾಯಕ್ಕೆ ಬರಲಿಲ್ಲ. ಸ್ವಾರ್ಥದಿಂದ ಕೆಲಸ ಮಾಡಲಿಲ್ಲ, 45 ವರ್ಷ ಪಕ್ಷದ ಸಂಘಟನೆಗಾಗಿ ಕೆಲಸ ಮಾಡಿರುವುದಾಗಿ ಪುಟ್ಟಸ್ವಾಮಿ ಹೇಳಿದ್ದಾರೆ.

ಆದರೆ, ಪುಟ್ಟಸ್ವಾಮಿ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಲು  ಬಿ.ಎಸ್. ಯಡಿಯೂರಪ್ಪ ನಿರಾಕರಿಸಿದ್ದಾರೆ.


Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT