ಬೆಂಗಳೂರು ಕಿಮ್ಸ್ ಆಸ್ರತ್ರೆ 
ರಾಜ್ಯ

ಮುಂದುವರಿದ ಬೆಂಗಳೂರು ಕಿಮ್ಸ್ ವೈದ್ಯರ ಮುಷ್ಕರ: 5ನೇ ದಿನವೂ ಒಪಿಡಿ ಬಂದ್

ಕಿಮ್ಸ್ ಸೇರಿದಂತೆ ಒಕ್ಕಲಿಗರ ಸಂಘದ ಅಧೀನದಲ್ಲಿರುವ ಎಲ್ಲಾ 18 ವಿದ್ಯಾಸಂಸ್ಥೆಗಳಲ್ಲಿ ಬೋಧಕೇತರ ಸಿಬ್ಬಂದಿಯನ್ನು ಅನಗತ್ಯವಾ...

ಬೆಂಗಳೂರು: ಕಿಮ್ಸ್ ಸೇರಿದಂತೆ ಒಕ್ಕಲಿಗರ ಸಂಘದ ಅಧೀನದಲ್ಲಿರುವ ಎಲ್ಲಾ 18 ವಿದ್ಯಾಸಂಸ್ಥೆಗಳಲ್ಲಿ ಬೋಧಕೇತರ ಸಿಬ್ಬಂದಿಯನ್ನು ಅನಗತ್ಯವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ’ ಎಂದು ವೈದ್ಯರು ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು 5ನೇ ದಿನವೂ ಒಪಿಡಿ ಮುಚ್ಚಿದೆ.
2014 ರಿಂದೀಚೆಗೆ ಕಾನೂನು ಬಾಹಿರವಾಗಿ ನೇಮಕವಾಗಿರುವ ಅಧಿಕ ಸಂಖ್ಯೆಯ ಸಿಬ್ಬಂದಿಯನ್ನು ತೆಗೆದು ಹಾಕಬೇಕು. 200 ಹುದ್ದೆಗಳಿಗೆ 670 ಸಿಬ್ಬಂದಿಯನ್ನು ರಾಜ್ಯ ಒಕ್ಕಲಿಗರ ಸಂಘ ನೇಮಿಸಿಕೊಂಡಿದೆ ಎಂದು  ರಾಜ್ಯ ಒಕ್ಕಲಿಗರ ಸಂಘ ಸಿಬ್ಬಂದಿ ಅಸೋಸಿಯೇಷನ್ ಅಧ್ಯಕ್ಷ ವಸಂತ್ ಕುಮಾರ್ ಹೇಳಿದ್ದಾರೆ.
ಆಡಳಿತ ಮಂಡಳಿ ಖಾಯಂ ಸಿಬ್ಬಂದಿಗೆ ವೇತನ ನೀಡಲು ಪರದಾಡುತ್ತಿದೆ. ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿರುವುದೇ ಈ ಎಲ್ಲಾ ಹಣಕಾಸು ಸಮಸ್ಯೆಗೆ ಕಾರಣ ಎಂದು ವಿನೋದ್ ಎಂಬುವರು ಆರೋಪಿಸಿದ್ದಾರೆ
ಪ್ರತಿ ಹುದ್ದೆಗೆ 5 ಲಕ್ಷ ರು ಹಣ ಪಡೆಯಲಾಗಿದೆ ಇದರಿಂದ ಸುಮಾರು 30 ಕೋಟಿ ರು ಹಣ ಸಂಗ್ರಹವಾಗಿದೆ, ಎಂದು ಆರೋಪಿಸಿದ್ದಾರೆ. 2014 ರಿಂದಿಚೇಗೆ ನೇಮಿಸಿಕೊಂಡಿರುವ ಸಿಬ್ಬಂದಿಯನ್ನು ವಜಾ ಮಾಡುವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ,ನಮ್ಮ ಬೇಡಿಕೆ ಈಡೇರದಿದ್ದರೆ ಇನ್ನೂ ಉಗ್ರ ಸ್ವರೂಪದಲ್ಲಿ ಪ್ರತಿಭಟನೆ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್