ಸಂಗ್ರಹ ಚಿತ್ರ 
ರಾಜ್ಯ

ಗೌರಿ ಹತ್ಯೆ ತನಿಖೆ ಪೂರ್ಣಾವಾಗುವವರೆಗು ಆರೋಪಿಗಳು ಬೇರೆ ತನಿಖಾ ಸಂಸ್ಥೆ ವಶಕ್ಕೆ ಬೇಡ: ನ್ಯಾಯಾಲಯಕ್ಕೆ ಎಸ್ಐಟಿ ಮನವಿ

ಗೌರಿ ಹತ್ಯೆ ತನಿಖೆ ತಾರ್ಕಿಕ ಅಂತ್ಯ ಕಾಣುವವರೆಗೂ ಪ್ರಸ್ತುತ ಬಂಧನಕ್ಕೊಳಗಾಗಿರುವ ಆರೋಪಿಯನ್ನು ಯಾವುದೇ ತನಿಖಾ ಸಂಸ್ಥೆಯ ವಶಕ್ಕೆ ನೀಡದಿರಿ ಎಂದು ನ್ಯಾಯಾಲಯದ ಬಳಿ ವಿಶೇಷ ತನಿಖಾ ದಳ ಸಂಸ್ಥೆ ಭಾನುವಾರ ಮನವಿ ಮಾಡಿಕೊಂಡಿದೆ...

ಬೆಂಗಳೂರು: ಗೌರಿ ಹತ್ಯೆ ತನಿಖೆ ತಾರ್ಕಿಕ ಅಂತ್ಯ ಕಾಣುವವರೆಗೂ ಪ್ರಸ್ತುತ ಬಂಧನಕ್ಕೊಳಗಾಗಿರುವ ಆರೋಪಿಯನ್ನು ಯಾವುದೇ ತನಿಖಾ ಸಂಸ್ಥೆಯ ವಶಕ್ಕೆ ನೀಡದಿರಿ ಎಂದು ನ್ಯಾಯಾಲಯದ ಬಳಿ ವಿಶೇಷ ತನಿಖಾ ದಳ ಸಂಸ್ಥೆ ಭಾನುವಾರ ಮನವಿ ಮಾಡಿಕೊಂಡಿದೆ. 
ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ(ಎಸ್ಐಟಿ)ದ ಅಧಿಕಾರಿಗಳು, ಆರೋಪಿಯನ್ನು ಯಾವುದೇ ತನಿಖಾ ಸಂಸ್ಥೆಗಳ ವಶಕ್ಕೆ ನೀಡದಂತೆ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದ್ದಾರೆಂದು ಎಸ್ಐಟಿ ಮೂಲಗಳು ಮಾಹಿತಿ ನೀಡಿವೆ. 
ಗೌರಿ ಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಮಹಾರಾಷ್ಟ್ರ ಎಸ್ಐಟಿ ಮತ್ತು ಕರ್ನಾಟಕ ಸಿಐಡಿ ನ್ಯಾಯಾಲಯದ ಬಳಿ ಮನವಿ ಮಾಡಿಕೊಳ್ಳಲು ಚಿಂತನೆ ನಡೆಸುತ್ತಿರುವ ಹಿನ್ನಲೆಯಲ್ಲಿ, ಗೌರಿ ಹತ್ಯೆ ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೂ ಯಾವುದೇ ತನಿಖಾ ಸಂಸ್ಥೆಯ ವಶಕ್ಕೆ ನೀಡದಂತೆ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. 
ಈ ಎಲ್ಲಾ ತನಿಖೆ ಸಂಸ್ಥೆಗಳು ಈ ಹಿಂದೆಯೇ ಗೌರಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಗೌರಿ ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಈ ಹಂತದಲ್ಲಿ ತನಿಖೆ ಸ್ಥಗಿತಗೊಳ್ಳುವುದು ನಮಗಿಷ್ಟವಿಲ್ಲ. ಪ್ರಸ್ತುತ ಬಂಧನಕ್ಕೊಳಗಾಗಿರುವ ಆರೋಪಿಗಳನ್ನು ಇತರೆ ತನಿಖಾ ಸಂಸ್ಥೆಗಳ ವಶಕ್ಕೆ ನೀಡಿದರೆ, ಗೌರಿ ಹತ್ಯೆ ಪ್ರಕರಣದ ತನಿಖೆಗೆ ಸಮಸ್ಯೆಯಾಗುತ್ತದೆ. ತನಿಖೆ ಯಾವುದೇ ರೀತಿಯ ಅಡೆತಡೆಗಳಾಗಬಾರದು. ವಿಳಂಬ ಕೂಡ ಆಗಬಾರದು. ತನಿಖೆ ಪೂರ್ಣಗೊಳ್ಳುವುದಷ್ಟೇ ನಮ್ಮ ಪ್ರಾಮುಖ್ಯತೆಯಾಗಿದೆ. ಪ್ರಕರಣ ಶೀಘ್ರಗತಿಯಲ್ಲಿ ತಾರ್ಕಿಕ ಅಂತ್ಯ ಕಾಣಬೇಕು. ತನಿಖೆ ಹಂತದಲ್ಲಿ ಯಾವುದೇ ಅಡೆತಡೆಗಳುಂಟಾಗಬಾರದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!