ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಅಪಘಾತ, ಓರ್ವ ಸಜೀವ ದಹನ 
ರಾಜ್ಯ

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿ ಸುತ್ತಮುತ್ತಲ ಮನೆಗಳಿಗೆ ಬೆಂಕಿ, ಓರ್ವ ಸಜೀವ ದಹನ

ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಓರ್ವ ಸಜೀವ ದಹನವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು: ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಓರ್ವ ಸಜೀವ ದಹನವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದಿದೆ.
ಕಡೂರು ತಾಲೂಕಿನ ಗಿರಿಯಾಪುರದಲ್ಲಿ ಈ ಅವಘಡ ಸಂಭವಿಸಿದ್ದು ಘಟನೆಯಿಂದ ಟ್ಯಾಂಕರ್ ಹಾಗೂ ಹದಿನೈದು ಮನೆಗಳಿಗೆ ಬೆಂಕಿ ತಗುಲಿದೆ. ಸಧ್ಯ ಅಪಘಾತಕ್ಕೀಡಾದ ಟ್ಯಾಂಕರ್ ಸುತ್ತ ಸುಮಾರು 100 ಮೀ. ವರೆಗೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ.
ಘಟನಾ ಸ್ಥಳಕ್ಕೆ ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಲು ಹರ ಸಾಹಸ ಪಡುತ್ತಿದೆ. ಬೆಂಕಿ ತಗುಲಿದ ಮನೆಗಳಲ್ಲಿರುವವರ ಸ್ಥಿತಿ ಏನಾಗಿದೆ ಎನ್ನುವುದು ತಿಳಿದು ಬಂದಿಲ್ಲ.
ಟ್ಯಾಂಕರ್ ಕಡೂರಿನಿಂದ ಹೊಸದುರ್ಗದ ಕಡೆ ಸಾಗುತ್ತಿತ್ತು. ಗಿರಿಯಾಪುರಕ್ಕೆ ಸಮೀಪಿಸಿದ್ದ ಟ್ಯಾಂಕರ್ ರಸ್ತೆ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಬಿದ್ದ ರಭಸಕ್ಕೆ ಬೆಂಕಿ ಆವರಿಸಿಕೊಂಡಿದೆ. ಘಟನೆಯಿಂದಾಗಿ ಸ್ಥಳೀಯರು ಆತಂಕಕ್ಕಿಡಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT