ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ಕಾವೇರಿ ನೀರು ಕುರಿತು ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಕರ್ನಾಟಕ ಧಿಕ್ಕರಿಸುವುದಿಲ್ಲ: ಸಿಎಂ ಕುಮಾರಸ್ವಾಮಿ

ಅಂತರರಾಜ್ಯ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ನಿರ್ಧಾರ ಕೈಗೊಳ್ಳುವಾಗ ಸಂಸತ್ ನ ಎರಡು ಮನೆಗಳಲ್ಲಿ ಚರ್ಚಿಸಿ...

ಬೆಂಗಳೂರು: ಕಸದ ಸಮಸ್ಯೆ ಬಗೆಹರಿಸಲು ಗಾರ್ಬೇಜ್ ಮಾಫಿಯಾ ಬಿಡುವುದಿಲ್ಲ, ಮರಳು ಮಾಫಿಯ ಮತ್ತು ಕಸದ ಸಮಸ್ಯೆ ಬಗೆ ಹರಿಸಲು ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ, 
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಕುಮಾರ ಸ್ವಾಮಿ ಮರಳು ಹಾಗೂ ಗಾರ್ಬೇಜ್ ಮಾಫಿಯಾ ವಿರುದ್ಧ ಯಾವುದೇ ಮುಲಾಜಿಗೊಳಗಾಗದೇ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಸಾಲಮನ್ನಾಗೆ ಬದ್ದ ಎಂದು ಹೇಳಿರುವ ಕುಮಾರ ಸ್ವಾಮಿ ಮೂರು ತಿಂಗಳ ಕಾಲಾವಕಾಶ ನೀಡಿ, ನಮ್ಮ ಸರ್ಕಾರದ ಕಾರ್ಯವೈಖರಿ ಬಗ್ಗೆ ನಿಮಗೆ ತಿಳಿಯುತ್ತದೆ ಎಂದು ಹೇಳಿದರು.
ಅನಗತ್ಯ ದುಂದುವೆಚ್ಚಕ್ಕೆ ಕಡಿವಾಣ ಹಾಕಲು ನಾನು ವಿಶೇಷ ವಿಮಾನದಲ್ಲಿ ಪ್ರಯಾಣಿಸುತ್ತಿಲ್ಲ, ಅದಕ್ಕೆ ಖರ್ಚು ಮಾಡುವ ಹಣವನ್ನು ಯಾವುದಾದೂ ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಭದ್ರತೆ ಹಾಗೂ ಬೆಂಗಾವಲು ವಾಹನಗಳ ಸಂಖ್ಯೆ ಕಡಿಮೆ ಮಾಡಿ ಎಂದು ಹೇಳಿದರೆ ಅದಕ್ಕೆ ಅಧಿಕಾರಿಗಳು ಒಪ್ಪುತ್ತಿಲ್ಲ ಎಂದು ಹೇಳಿದ್ದಾರೆ.
ಕೇಂದ್ರದ ಮನವೊಲಿಸಿ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುತ್ತಿದ್ದೇನೆ, ಒಂದು ಕ್ಷಣವನ್ನು ವ್ಯರ್ಥ ಮಾಡದೆ ರಾಜ್ಯದ ಅಭಿವೃದ್ಧಿಗಾಗಿ ಪ್ರಯತ್ನಿಸುತ್ತಿದ್ದೇನೆ, ಸಾಲ ಮನ್ನಾ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಅದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದ ಅವಶ್ಯಕತೆಯಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಸಂಬಂಧ ಮಾತನಾಡಿದ ಕುಮಾರಸ್ವಾಮಿ ಸುಪ್ರೀಂ ಕೋರ್ಟ್ ನ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಉಲ್ಲಂಘಿಸಿಲ್ಲ, ಸುಪ್ರೀಂ ಆದೇಶವನ್ನು ಉಲ್ಲಂಘಿಸುವ ಉದ್ದೇಶ ನಮಗಿಲ್ಲ, ನಿರ್ವಹಣಾ ಮಂಡಳಿ ವೈಜ್ಞಾನಿಕವಾಗಿ ರಚನೆಯಾಗಬೇಕು ಎಂಬುದು ನಮ್ಮ ಆಶಯವಾಗಿದೆ, ಅಂತರರಾಜ್ಯ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ನಿರ್ಧಾರ ಕೈಗೊಳ್ಳುವಾಗ ಸಂಸತ್ ನ ಎರಡು ಮನೆಗಳಲ್ಲಿ ಚರ್ಚಿಸಿ ನಂತರ ಅಂತಿಮ ತೀರ್ಮಾನ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT