ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲ್ಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳೊಂದಿಗೆ, ಶಿಕ್ಷಕರು ಹಾಗೂ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದ ನಟ ಪ್ರಕಾಶ್ ರಾಜ್ 
ರಾಜ್ಯ

ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಲು ನಾನ್ಯಾರು?: ನಟ ಪ್ರಕಾಶ್ ರಾಜ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಸ್ಥಾಪಿಸಿದ ಶಾಲೆಗಳನ್ನು ದತ್ತು ತೆಗೆದುಕೊಳ್ಳಲು ನಾನು ಯಾರು? ...

ತುಮಕೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಸ್ಥಾಪಿಸಿದ ಶಾಲೆಗಳನ್ನು ದತ್ತು ತೆಗೆದುಕೊಳ್ಳಲು ನಾನು ಯಾರು? ಶಾಲೆಗಳಿಗೆ ಉತ್ತಮ ಮೂಲಭೂತ ಸೌಕರ್ಯ ಒದಗಿಸಿ ಹೆಚ್ಚೆಚ್ಚು ಮಕ್ಕಳು ಸರ್ಕಾರಿ ಶಾಲೆಗಳಿಗೆ ದಾಖಲಾತಿ ಹೊಂದುವಂತೆ ನೋಡಿಕೊಳ್ಳಬೇಕು ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ಅವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೊಯ್ಸಳಕಟ್ಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಾಲೆಯ ಮಕ್ಕಳು ಮತ್ತು ಶಿಕ್ಷಕರೊಂದಿಗೆ ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಶಾಲೆಗಳ ಗುಣಮಟ್ಟ ಉತ್ತಮಪಡಿಸಬೇಕೆಂದು ಶಾಲೆಯನ್ನು ದತ್ತು ತೆಗೆದುಕೊಳ್ಳಲು ನನಗೆ ಸಾಧ್ಯವಿಲ್ಲ. ಅದರ ಬದಲಿಗೆ ಅಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನನ್ನ ಕೈಲಾದ ಮಟ್ಟಿಗೆ ಕೊಡುಗೆ ನೀಡಬಹುದು ಎಂದು ಹೇಳಿದರು.

ಸರ್ಕಾರಿ ಶಾಲೆಗಳ ಸಶಕ್ತೀಕರಣಕ್ಕೆ ನಟ ಪ್ರಕಾಶ್ ರಾಜ್ ರಾಜ್ಯದಾದ್ಯಂತ ಪ್ರವಾಸ ಮಾಡಿ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತವ ಪರಿಸ್ಥಿತಿಗಳ ಬಗ್ಗೆ ಅಧ್ಯಯನ ನಡೆಸಿ ಅಲ್ಲಿನ ಶಿಕ್ಷಕರು ಮತ್ತು ಕಾರ್ಯಕರ್ತರೊಂದಿಗೆ ಪ್ರಕಾಶ್ ರಾಜ್ ಫೌಂಡೇಶನ್ ಮೂಲಕ ಕೈಜೋಡಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ