ಎನ್. ಮಹೇಶ್ 
ರಾಜ್ಯ

ಹೊಸ ಖಾಸಗಿ ಪಿಯು ಕಾಲೇಜು ಅನುಮೋದನೆ ವಿವಾದ: ತನಿಖೆಗೆ ಸಚಿವರ ಆದೇಶ

ರಾಜ್ಯದಲ್ಲಿ ಹೊಸ ಖಾಸಗಿ ಪದವಿ ಪೂರ್ವ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಆದೇಶಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ  ಹೊಸ ಖಾಸಗಿ ಪದವಿ ಪೂರ್ವ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ವಿವಾದಕ್ಕೆ ಸಂಬಂಧಿಸಿದಂತೆ  ತನಿಖೆಗೆ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಆದೇಶಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವರು, ಶಿಕ್ಷಣ ಇಲಾಖೆ ವಿರುದ್ಧ ಕೇಳಿಬಂದಿರುವ ಎರಡು ಆರೋಪಗಳ ತನಿಖೆಗಾಗಿ  ಸಮಿತಿಯನ್ನು  ರಚಿಸಲಾಗಿದೆ ಎಂದು ತಿಳಿಸಿದರು.

 ನೀತಿ ಸಂಹಿತೆ ಉಲ್ಲಂಘಿಸಿ ಖಾಸಗಿ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡಿರುವುದು ಒಂದು ಆರೋಪವಾದರೆ,  ಸರ್ಕಾರಿ ಕಾಲೇಜುಗಳ ಮೂರು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಖಾಸಗಿ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡಬಾರದು ಎಂಬ ನಿಯಮವನ್ನು ಉಲ್ಲಂಘಿಸಿರುವುದು ಮತ್ತೊಂದು ಆರೋಪವಾಗಿದೆ.

 ಆದಾಗ್ಯೂ,  ಬಾಹ್ಯಾವಾಗಿ ತನಿಖೆ ನಡೆಸಲಾಗುತ್ತದೆಯೇ ಅಥವಾ ಆತಂಕರಿಕ ಏಜೆನ್ಸಿಯಿಂದ ತನಿಖೆ  ನಡೆಯುತ್ತದೆಯೇ ಎಂಬ ಬಗ್ಗೆ ಸಚಿವರು ಸ್ಪಷ್ಪಪಡಿಸಿಲ್ಲ. ತನಿಖೆ ಮಾದರಿಯನ್ನು ಶೀಘ್ರದಲ್ಲಿಯೇ  ನಿರ್ಧಾರ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.ಬಾಹ್ಯ ತನಿಖೆಗೆ ಒಪ್ಪಿಕೊಳ್ಳುತ್ತೇನೆ ಆದರೆ, ಸಮಿತಿ ಮುಂದೆ ಕಾನೂನು ಮತ್ತು ನಿಯಮಗಳನ್ನು ಗಮನಿಸಬೇಕಾಗಿದೆ ಎಂದರು.

84 ಹೊಸ ಪದವಿ ಪೂರ್ವ ಕಾಲೇಜುಗಳ  ಸ್ಥಾಪನೆಗೆ ಅನುಮೋದನೆ ನೀಡಲಾಗಿದ್ದು, ಸರ್ಕಾರದ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿಧಾನಪರಿಷತ್ ಸದಸ್ಯ ಅರುಣ್ ಶಹಾಪೂರ ಆರೋಪಿಸಿದ್ದರು.

ಮೂಲಸೌಕರ್ಯ ಕೊರತೆ ಹಾಗೂ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ  84 ಕಾಲೇಜುಗಳ ಸ್ಥಾಪನೆಗೆ  ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಅನುಮೋದನೆ ನೀಡಿರಲಿಲ್ಲ. ಆದರೆ,  ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನ ಕಾರ್ಯದರ್ಶಿ  ಆದೇಶ ಮೇರೆಗೆ ಅನುಮೋದನೆ ನೀಡಲಾಗಿದೆ ಎಂದು ಶಹಾಪೂರ ಆರೋಪಿಸಿದ್ದರು.

 ಹೊಸ  ಪದವಿ ಪೂರ್ವ ಕಾಲೇಜುಗಳ ಸ್ಥಾಪನೆಗೆ ಸಂಬಂಧಿಸಿದ ಕಾನೂನಿಗೆ ಶೀಘ್ರದಲ್ಲಿಯೇ ತಿದ್ದುಪಡಿ ತರಲಾಗುವುದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಕುರಿತು ಸಾರಿಗೆ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಎನ್. ಮಹೇಶ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video