ಚಿಕ್ಕಮಗಳೂರು: ಚಿಕ್ಕಮಗಳೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಚಿಕ್ಕಮಗಳೂರಿನ ಗೌರಿ ಕಾಲುವೆ ಬಳಿ ಬಿಜೆಪಿ ಮುಖಂಡ ಉಪ್ಪಳ್ಳಿ ನಿವಾಸಿ 46 ವರ್ಷದ ಅನ್ವರ್ ಎಂಬಾತನನ್ನು ದುಷ್ಕರ್ಮಿಗಳು ಚೂರಿಯಿಂದ 3 ಬಾರಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಅನ್ವರ್ ನನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸದ್ಯ ಅನ್ವರ್ ಮೃತದೇಹವನ್ನು ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಇಡಲಾಗಿದೆ.