ಶರತ್ ಮಡಿವಾಳ ಹತ್ಯೆ: ಆರೋಪಿ ಮಹಮದ್ ಷರೀಫ್ ಗೆ ಹೈಕೋರ್ಟ್ ಜಾಮೀನು 
ರಾಜ್ಯ

ಶರತ್ ಮಡಿವಾಳ ಹತ್ಯೆ: ಆರೋಪಿ ಮಹಮದ್ ಷರೀಫ್ ಗೆ ಹೈಕೋರ್ಟ್ ಜಾಮೀನು

ಆರ್ ಎಸ್ ಎಸ್ ಕಾರ್ಯಕರ್ತನಾಗಿದ್ದ ಶರತ್ ಮ್ನಡಿವಾಳ ಹತ್ಯೆಯ ಪ್ರಮುಖ ಆರೋಪಿ ಮಹಮದ್ ಷರೀಫ್ ಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ.

ಬೆಂಗಳೂರು: ಆರ್ ಎಸ್ ಎಸ್ ಕಾರ್ಯಕರ್ತನಾಗಿದ್ದ ಶರತ್ ಮ್ನಡಿವಾಳ ಹತ್ಯೆಯ ಪ್ರಮುಖ ಆರೋಪಿ ಮಹಮದ್ ಷರೀಫ್ ಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಜಾನ್ ಮೈಕಲ್ ಕುನ್ಮಾ ಅವರನ್ನೊಳಗೊಂಡ ಏಕಸದಸ್ಯ ಪೀಠ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. 2 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ಸೇರಿದಂತೆ ಇನ್ನಿತರೆ ಷರತ್ತುಗಳ ಮೇಲೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ವರದಿಯಾಗಿದೆ.
ಆರೊಪಿಗಳ ವಿರುದ್ಧ ಸಮರ್ಪಕ ಸಾಕ್ಷಾಧಾರ ಸಂಗ್ರಹಣೆ ಮಾಡುವಲ್ಲಿ ಪೋಲೀಸರು ವಿಫಲರಾಗಿದ್ದಾರೆ ಎಂದು ಅಭಿಪ್ರಾಯ ಪಟ್ಟ ನ್ಯಾಯಾಲಯ ಹತ್ಯೆ ನಡೆದು 10 ದಿನದ ಬಳಿಕ ಸಾಕ್ಷಿಗಳ ಹೇಳಿಕೆ ಪಡೆಯಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಕಳೆದ ವರ್ಷ ಜುಲೈ 4ರಂದು ಬಂಟ್ವಾಳದ ಬಿಸಿ ರೋಡ್ ಬಳಿ ತನ್ನ ಲಾಂಡ್ರಿ ಅಂಗಡಿಯಲ್ಲಿದ್ದ ಶರತ್ ಮಡಿವಾಳ  ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶರತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್