ಆರು ಬೋಗಿಗಳ ಮೆಟ್ರೋ ರೈಲಿಗೆ ಶುಕ್ರವಾರ ಚಾಲನೆ ನೀಡುತ್ತಿರುವ ಸಿಎಂ ಕುಮಾರಸ್ವಾಮಿ 
ರಾಜ್ಯ

ಬಿಎಂಆರ್​ಸಿಎಲ್ - ನೌಕರರ ಸಂಧಾನ ಬಹುತೇಕ ಯಶಸ್ವಿ

ಪದೇಪದೆ ಮುಷ್ಕರದ ಬೆದರಿಕೆ ಹಾಕುತ್ತಿದ್ದ ಬೆಂಗಳೂರು ಮೆಟ್ರೋ ರೈಲು ನೌಕರರ ಸಂಘದ ಬೇಡಿಕೆಗಳನ್ನು ಈಡೇರಿಸಲು...

ಬೆಂಗಳೂರು: ಪದೇಪದೆ ಮುಷ್ಕರದ ಬೆದರಿಕೆ ಹಾಕುತ್ತಿದ್ದ ಬೆಂಗಳೂರು ಮೆಟ್ರೋ ರೈಲು ನೌಕರರ ಸಂಘದ ಬೇಡಿಕೆಗಳನ್ನು ಈಡೇರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್ ಸಿಎಲ್) ಒಪ್ಪಿಕೊಂಡಿದೆ.
ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್ ಅವರ ಪ್ರಕಾರ, ಈ ಕೇಳಗಿನ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿದ್ದು, ಸಂಧಾನ ಬಹುತೇಕ ಯಶಸ್ವಿಯಾಗಿದೆ ಎನ್ನಲಾಗಿದೆ.
ಆರ್ಥಿಕ ಬೇಡಿಕೆಗಳು:
1. ರಾತ್ರಿ ಪಾಳಿಯ ಭತ್ಯೆ
2. ಕಠಿಣ ಕೆಲಸದ ಭತ್ಯೆ(ರೈಲು ನಿರ್ವಹಕರಿಗೆ ಮಾತ್ರ) 
3. ಸಮವಸ್ತ್ರ ತೊಳೆಯುವ ಭತ್ಯೆ
4. ಸಾರಿಗೆ ಭತ್ಯೆ
5. ಸಾಮಾನ್ಯ ರಜೆ ಭತ್ಯೆ
ಆರ್ಥಿಕೇತರ ಬೇಡಿಕೆ:
1. ಬಿಎಂಆರ್ ಸಿಎಲ್ ಡಿಪೋದಲ್ಲಿನ ಕ್ಯಾಂಟೀನ್ ನಲ್ಲಿ ಕಡಿಮೆ ಬೆಲೆ ಆಹಾರ
2. ನೌಕರರ ಕನ್ನಡ ಸಂಘಕ್ಕೆ ಮಾನ್ಯತೆ
3. 100 ಮಹಿಳೆಯರು ಕೆಲಸ ಮಾಡುವ ನಿಲ್ದಾಣದಲ್ಲಿ ಕ್ರೀಚ್ ಸೌಲಭ್ಯ
4. ನೌಕರರೊಂದಿಗೆ ವಾರ್ಷಿಕ ಅಪ್ರೈಸಲ್ ಪ್ರತಿ ಹಂಚಿಕೊಳ್ಳಬೇಕು
5. ಸಿಬ್ಬಂದಿಗೆ ಹೆಚ್ಚುವರಿ ಸಮವಸ್ತ್ರ ನೀಡಬೇಕು
ಈ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಮೆಟ್ರೋ ಆಡಳಿತ ಮಂಡಳಿ ಹಾಗೂ ನೌಕರರ ಸಂಘದ ನಡುವೆ ಹಲವು ಬಾರಿ ದ್ವಿಪಕ್ಷೀಯ ಮಾತುಕತೆ ನಡೆದಿದ್ದರೂ ಫಲಪ್ರದವಾಗಿರಲಿಲ್ಲ. ಹೀಗಾಗಿ ಇತ್ತೀಚಿಗಷ್ಟೇ ಈ ವಿಚಾರದಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುವ ಅಗತ್ಯವಿದೆ. ಮುಂದಿನ ಹತ್ತು ದಿನಗಳಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಥವಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯು ಬಿಎಂಆರ್​ಸಿಎಲ್ ಹಾಗೂ ನೌಕರರ ಸಂಘದೊಡನೆ ತ್ರಿಪಕ್ಷೀಯ ಮಾತುಕತೆ ನಡೆಸಿ, ನೌಕರರ ಆರ್ಥಿಕ ಮತ್ತು ಆರ್ಥಿಕೇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಬೇಕೆಂದು ಹೈಕೋರ್ಟ್ ಸೂಚಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು