ರೋಹಿಣಿ ಸಿಂದೂರಿ 
ರಾಜ್ಯ

ಕಾನೂನು ಹೋರಾಟದಲ್ಲಿ ಜಯ, ರೋಹಿಣಿ ಮತ್ತೆ ಹಾಸನ ಜಿಲ್ಲಾಧಿಕಾರಿ

ಕೊನೆಗೂ ರಾಜ್ಯಸರ್ಕಾರದ ವಿರುದ್ಧದ ಹೋರಾಟದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂದೂರಿಗೆ ಜಯ ಸಿಕ್ಕಿದೆ. ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ.

ಬೆಂಗಳೂರು: ಕೊನೆಗೂ ರಾಜ್ಯಸರ್ಕಾರದ ವಿರುದ್ಧದ ಹೋರಾಟದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂದೂರಿಗೆ ಜಯ ಸಿಕ್ಕಿದೆ. ಅವರನ್ನು ಮತ್ತೆ  ಹಾಸನ ಜಿಲ್ಲಾಧಿಕಾರಿಯಾಗಿ  ರಾಜ್ಯಸರ್ಕಾರ ವರ್ಗಾವಣೆ ಮಾಡಿದೆ.
ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಚುನಾವಣೆ ಸಂದರ್ಭದಲ್ಲಿ ಮಾರ್ಚ್ 7 , 2018ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿತ್ತು.ಅವಧಿ ಪೂರ್ವ ವರ್ಗಾವಣೆ ವಿರೋಧಿಸಿ ರೋಹಿಣಿ ಸಿಂದೂರಿ ಸಿಎಟಿ ಹಾಗೂ ಹೈಕೋರ್ಟ್  ಮೊರೆ ಹೋಗಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್  ವಿಭಾಗೀಯ ಪೀಠದ  ನ್ಯಾಯಾಧೀಶರಾದ ಹೆಚ್. ಜಿ. ರಮೇಶ್ ಹಾಗೂ  ಮೊಹಮ್ಮದ್ ನವಾಜ್  ಅವರಿದ್ದ ಪೀಠದ ಮುಂದೆ ರೋಹಿಣಿ ಸಿಂದೂರಿ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ನೇಮಿಸುವುದಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್. ಪೊನ್ನಣ್ಣ  ಹೇಳಿಕೆ ನೀಡಿದ್ದರು.
ಅದರಂತೆ ಅವರನ್ನು ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!