ಸಚಿವ ಡಿಕೆ ಶಿವಕುಮಾರ್ 
ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದ ಇಬ್ಬರು ಪ್ರತಿನಿಧಿಗಳ ನೇಮಕ

ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ರಾಜ್ಯದ ಇಬ್ಬರು ಪ್ರತಿನಿಧಿಗಳನ್ನು ಸೋಮವಾರ ನೇಮಕ ಮಾಡಿದ್ದು....

ಬೆಂಗಳೂರು: ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ರಾಜ್ಯದ ಇಬ್ಬರು ಪ್ರತಿನಿಧಿಗಳನ್ನು ಸೋಮವಾರ ನೇಮಕ ಮಾಡಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧದ ಸಂಘರ್ಷ ಕೈಬಿಟ್ಟು, ಸೌಹಾರ್ದದ ಹಾದಿ ತುಳಿಯಲು ಮುಂದಾಗಿದೆ.
ಕಾವೇರಿ ನೀರು ನಿರ್ವಹಣಾ ಮಂಡಳಿಗೆ ರಾಜ್ಯದಿಂದ ಇಬ್ಬರು ಅಧಿಕಾರಿಗಳ ಹೆಸರನ್ನು ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ. ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಈ ಸಂಬಂಧ ಇಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಜಲ‌ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಗೂ ಕಾವೇರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಚ್ ಎಲ್ ಪ್ರಸನ್ನ ಅವರನ್ನು ರಾಜ್ಯದ ಪ್ರತಿನಿಧಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದರು. 
ಇದೇ ವೇಳೆ ಕಾವೇರಿ ಕುರಿತ ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಪ್ರತಿಪಕ್ಷ ನಾಯಕರೊಂದಿಗೆ, ಸಂಸದರೊಂದಿಗೆ ಸಭೆ ನಡೆಸಲು ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಜೂನ್ 1ರಂದು ಕೇಂದ್ರ ಸರ್ಕಾರ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಿತ್ತು. ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ರಾಜ್ಯಗಳಿಗೆ ಪ್ರತಿನಿಧಿಗಳನ್ನು ನೇಮಿಸುವಂತೆ ಸೂಚನೆ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!