ರ್ವಹಣಾ ಪ್ರಾಧಿಕಾರ ರಚನೆ ಕುರಿತಂತೆ ಚರ್ಚೆ ಮಾಡಲು ಸೋಮವಾರ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜಲ ಸಂಪನ್ಮೂಲ ಹಾಗೂ ಕಾನೂನು ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಬೆಂಗಳೂರು; ಕೇಂದ್ರ ಸರ್ಕಾರ ಕೆಲ ದಿನಗಳ ಹಿಂದಷ್ಟೇ ರಚನೆ ಮಾಡಿರುವ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿಯಿಂದಾಗಿ ಕಾವೇರಿ ನದಿ ಅವಲಂಬಿತ ರೈತರಿಗೆ ಸಮಸ್ಯೆಯಾಗುವುದರಿಂದ ಕೇಂದ್ರ ಸರ್ಕಾರ ನಿರ್ಧಾರದ ವಿರುದ್ಧ ಯಾವ ರೀತಿ ಹೋರಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲು ಸರ್ವಪಕ್ಷ ಸಭೆ ನಡೆಸು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಕಾವೇರಿ ನಿರ್ವಹಣಾ ಪ್ರಾಧಿಕಾರದಿಂದ ರಾಜ್ಯಕ್ಕೆ ಆಗಲಿರುವ ಅನ್ಯಾಯ ಹಾಗೂ ರಾಜ್ಯ ಸರ್ಕಾರದ ಮುಂದಿರುವ ಆಯ್ಕೆಗಳ ಬಗ್ಗೆ ಚರ್ಚೆ ಮಾಡಲು ಸೋಮವಾರ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಜಲ ಸಂಪನ್ಮೂಲ ಹಾಗೂ ಕಾನೂನು ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆಮಾತನಾಡಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು, ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿ ಆದೇಶಿಸಿರುವ ಕೇಂದ್ರ ಸರ್ಕಾರದ ಕ್ರಮದಿಂದ ರಾಜ್ಯಕ್ಕೆ ತೀವ್ರ ಅನ್ಯಾಯವಾಗಿದೆ. ನಮಗೆ ಆಗಿರುವ ಅನ್ಯಾಯದ ವಿರುದ್ಧ ಸಂಘಟಿತ ಹೋರಾಟ ನಡೆಸಲು 3-4 ದಿನಗಳಲ್ಲಿ ಸರ್ವ ಪಕ್ಷಗಳ ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ವಿವಾದದ ಬಗ್ಗೆ ಜೂ.18ರಂದೇ ಪತ್ರ ಬರೆದು ನಮ್ಮ ಅಭಿಪ್ರಾಯ ತಿಳಿಸಲು ಅವಕಾಶ ನೀಡಬೇಕೆಂದು ಮನವಿ ಮಾಡಿಕೊಂಡಿದ್ದೆವು. ಈ ಬಗ್ಗೆ ರಾಜ್ಯ ಸರ್ಕಾರದ ಪ್ರತಿನಿಧಿಗಳನ್ನು ಕರೆದು ಚರ್ಚೆಗೆ ಅವಕಾಶ ಕಲ್ಪಿಸುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಆದರೆ, ಮಾತಿಗೆ ತಪ್ಪಿ ರಾತ್ರೋರಾತ್ರಿ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.
ಇದರ ನಡುವೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಜುಲೈ.2 ರಂದು ಸಭೆ ನಡೆಸುವ ಬಗ್ಗೆ ಮಾಹಿತಿ ಬಂದಿದ್ದು, ನಮ್ಮ ರಾಜ್ಯದ ಪ್ರತಿನಿಧಿತ್ವ ಇಲ್ಲದೆ ನಿರ್ಧಾರ ತೆಗೆದುಕೊಳ್ಳಲು ಬಿಡಬಾರದು ಎಂಬ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕೇಂದ್ರಕ್ಕೆ ಪತ್ರ ಕಳುಹಿಸಿದ್ದೇನೆ. ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರಕ್ಕೆ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಅವರ ಹೆಸರು ಅಂತಿಗೊಳಿಸಿ ಕೇಂದ್ರಕ್ಕೆ ಮಾಹಿತಿ ನೀಡಿದ್ದೇವೆ.
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಕುರಿತು ಸಂಸತ್ ಅಧಿವೇಶನದಲ್ಲಿ ಚರ್ಚೆಯಾಗಬೇಕು. 4 ಕಾಜ್ಯಗಳಿಗೆ ಸಂಬಂಧಿಸಿದ ಅಂತರ್ ರಾಜ್ಯ ವ್ಯಾಜ್ಯವಾಗಿರುವುದರಿಂದ ಸಂಸತ್ತಿನಲ್ಲಿ ಚರ್ಚೆ ನಡೆಸುವುದು ಉತ್ತಮ. ಈ ಬಗ್ಗೆ ಸುಪ್ರೀಂಕೋರ್ಟ್'ಗೆ ನಾವು ಮನವರಿಕೆ ಮಾಡಿಕೊಟ್ಟಿದ್ದರೂ ನಮ್ಮ ಮನವಿ ಪುರಸ್ಕರಿಸಿಲ್ಲ. ಕೇಂದ್ರವಾದರೂ ಪುರಸ್ಕರಿಸಬೇಕು ಎಂದಿದ್ದಾರೆ.