ಕೆಂಪೇಗೌಡ ನೆನಪಲ್ಲಿ ಕೌಶಲ್ಯ ಅಭಿವೃದ್ದಿ ಕೇಂದ್ರ ಸ್ಥಾಪನೆ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ. ಇವರ ನೆನಪನ್ನು ಸದಾ ಹಸಿರಾಗಿಡಲು ಕೆಂಪೇಗೌಡ ಹೆಸರಲ್ಲಿ ಯುವಕರಿಗೆ ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ "ಇಂದು ಬೆಂಗಳೂರು ಜಾಗತಿಕವಾಗಿ ಗುರುತಿಸಿಕೊಳ್ಳುತ್ತಿದೆ ಎಂದರೆ ಅದಕ್ಕೆ ಕೆಂಪೇಗೌಡರ ಕೆಲಸಗಳೇ ಮೂಲ ಕಾರಣ. ಹೀಗಾಗಿ ಹಲವು ಅಭಿವೃದ್ದಿ ಕಾರ್ಯಗಳಿಗೆ ಅವರ ಹೆಸರನ್ನಿಡುವ ಉದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿನ ಯುವಜನತೆಗೆ ಸಹಕಾರಿಯಾಗುವಂತೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ಒದಗಿಸುವ ಸಂಸ್ಥೆ ಸ್ಥಾಪನೆ ಮಾಡುವ ಉದ್ದೇಶ ಸರ್ಕಾರದ ಮುಂದೆ ಇದ್ದು ಇದಕ್ಕೆ ಕೆಂಪೇಗೌಡರ ಹೆಸರನ್ನು ಇಡಲಾಗುತ್ತದೆ" ಎಂದರು.
"ಕೆಂಪೇಗೌಡರು ಕೇವಲ ಒಕ್ಕಲಿಗ ಸಮುದಾಯಕ್ಕಷ್ಟೇ ಸೀಮಿತವಾಗಿಲ್ಲ. ಅವರು ಬೆಂಗಳೂರನ್ನು ಕಟ್ಟಿದಾಗ ಯಾವುದೇ ಜಾತಿಗಾಗಿ ಕಟ್ಟಿಲ್ಲ, ಎಲ್ಲರಿಗಾಗಿ ಕಟ್ಟಿದ್ದಾರೆ. ನಗರದ ಕುಡಿಯುವ ನೀರು, ವಸತಿ ಸಮಸ್ಯೆಗಳು ಬಿಗಡಾಯಿಸಿದೆ. ಇದನ್ನು ಸರಿಪಡಿಸುವ ಜವಾಬ್ದಾರಿ ನಮ್ಮ ಸರ್ಕಾರದ ಮೇಲಿದೆ" ಅವರು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್ "ಅಂದು ಕೆಂಪೇಗೌಡ ಮಾಡಿದ್ದ ಕಾರ್ಯದ ಫ್ಲವನ್ನು ನಾವಿಂದು ಉಣ್ಣುತ್ತಿದ್ದೇವೆ.ಅವರ ಕುರಿತಂತೆ ಯುವ ಪೀಳಿಗೆ ಹೆಚ್ಚು ತಿಳಿದುಕೊಳ್ಳಬೇಕಿದೆ. ಶಾಲಾ ಪಠ್ಯಪುಸ್ತಕದಲ್ಲಿ ಕೆಂಪೇಗೌಡರ ಸಾಧನೆ ಸಂಬಂಧ ಪಾಠಗಳನ್ನು ಅಳವಡಿಸಬೇಕು ಎಂದರು.
"ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಕೆಂಪೇಗೌಡರ ಹೆಸರಿಡಬೇಕು.ಕೆಂಪೇಗೌಡ ಅಭಿವೃದ್ದಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಸಿಗುವಂತಾಗಬೇಕು ಎನ್ನುವುದು ಸೇರಿ ಹಲವು ಬೇಡಿಕೆಗಳಿದೆ. ಇದನ್ನು ಜಾರಿಗೆ ತರುವ ಸಂಬಂಧ ಸರ್ಕಾರ ಚಿಂತನೆ ನಡೆಸಲಿದೆ" ಶಿವಕುಮಾರ್ ಹೇಳಿದ್ದಾರೆ.
ಆದಿಚುಂಚನಗಿರಿ ಮಹಾಸಂಸ್ಥಾನದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ "ಕೆಂಪೇಗೌಡ ಜಯಂತಿಯನ್ನು ಎಲ್ಲಾ ಸಮುದಾಯದವರೂ ಆಚರಿಸಬೇಕು. ಅವರು ಯಾವ ರಾಜಕೀಯದ ದೃಷ್ಟಿಯಿಲ್ಲದೆ ಈ ನಗರವನ್ನು ನಿರ್ಮಿಸಿದ್ದಾರೆ." ಎಂದಿದ್ದಾರೆ.
ಸಚಿವೆ ಜಯಮಾಲ, ಕೃಷ್ಣ ಬೈರೇಗೌಡ, ಶಾಸಕರಾದ ಎಸ್.ಟಿ.ಸೋಮಶೇಖರ್, ಗೋವಿಂದರಾಜು, ಮೇಯರ್ ಆರ್.ಸಂಪತ್‌ರಾಜ್, ಸ್ಫಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಸ್ವಾಮೀಜಿ ಮೊದಲಾದವರು ಹಾಜರಿದ್ದ
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos