10 ಐಎಎಸ್ ಅಧಿಕಾರಿಗಳ ವರ್ಗಾವಣೆ: ಬೆಂಗಳೂರು ನಗರಕ್ಕೆ ನೂತನ ಜಿಲ್ಲಾಧಿಕಾರಿ
ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ವರ್ಗಾವಣೆ ಪರ್ವ ಮುಂದುವರಿದಿದ್ದೂ. 10 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ..,..
ಬೆಂಗಳೂರು: ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ವರ್ಗಾವಣೆ ಪರ್ವ ಮುಂದುವರಿದಿದ್ದೂ. 10 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಡಿಸಿ ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಅವರ ಸ್ಥಾನಕ್ಕೆ . ಬಿಎಂ ವಿಜಯಶಂಕರ್ ಅವರನ್ನು ನೇಮಕ ಮಾಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ವಿಶೇಷ ಆಯುಕ್ತರನ್ನಾಗಿ ಶಂಕರ್ ಅವರನ್ನು ನೇಮಿಸಲಾಗಿದೆ, ಎಂ.ಲಕ್ಷ್ಮೀನಾರಾಯಣ್- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ
ಇವಿ ರಮಣರೆಡ್ಡಿ – ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ
ಕಪಿಲ್ ಮೋಹನ್ – ಡಿಜಿ, ಆಡಳಿತ ಮತ್ತು ತರಬೇತಿ ಕೇಂದ್ರ
ಅನಿಲ್ ಕುಮಾರ್- ಕಾರ್ಯದರ್ಶಿ, ವಸತಿ ಇಲಾಖೆ
ನಿತೇಶ್ ಪಾಟೀಲ್ – ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ
ಮುನೀಷ್ ಮೌದ್ಗಿಲ್ – ಆಯುಕ್ತರು, ಸರ್ವೆ ಇಲಾಖೆ
ಬಿಎಸ್ ಶಂಕರಪ್ಪ – ನಿರ್ದೇಶಕರು, ಸಿಎಡಿಎ ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.