ಆರ್. ವಿ. ದೇಶಪಾಂಡೆ 
ರಾಜ್ಯ

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಕ್ಕೆ ಹಣದ ಕೊರತೆ ಇಲ್ಲ: ಆರ್.ವಿ. ದೇಶಪಾಂಡೆ

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸಮರೋಪಾದಿಯಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಬಳಿಯಲ್ಲಿ ಸಮರ್ಪಕವಾದ ಹಣ ಲಭ್ಯವಿರುವುದಾಗಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ತಿಳಿಸಿದ್ದಾರೆ.

ಚಿಕ್ಕಮಗಳೂರು : ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸಮರೋಪಾದಿಯಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಬಳಿಯಲ್ಲಿ ಸಮರ್ಪಕವಾದ ಹಣ ಲಭ್ಯವಿರುವುದಾಗಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜೂನ್ ತಿಂಗಳಲ್ಲಿ  ಜಿಲ್ಲೆಯಲ್ಲಿ 393 ಮಿಲಿ ಮೀಟರ್ ಮಳೆಯಾಗಿದೆ. ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಉತ್ತಮ ಮಳೆಯಾಗಿದ್ದು,  ಪರಿಹಾರ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿಗಳ ಪಿಡಿ ನಿಧಿಯಲ್ಲಿ 5.90 ಕೋಟಿ ರೂ. ಹಣ ಇರಿಸಲಾಗಿದೆ.  ಪ್ರತಿ ತಾಲೂಕುಗಳಿಗೂ 20 ಲಕ್ಷ ರೂಪಾಯಿ ನೀಡಲಾಗಿದ್ದು,  ಏಲ್ಲಿಯೂ ನಿಧಿಯ ಕೊರತೆ ಇಲ್ಲ ಎಂದು ಸ್ಪಷ್ಪಪಡಿಸಿದರು.
 ಮಳೆಯಿಂದಾಗಿ  ಮಾನವ ಪ್ರಾಣಿ ಹಾನಿ ಕುರಿತು ಎಲ್ಲಿಯೂ ವರದಿಯಾಗಿಲ್ಲ, ಆದರೆ, ಶೃಂಗೇರಿ ಶಾಸಕರು  ಒಬ್ಬರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಮಳೆಯಿಂದಾಗಿ  ಮೃತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ. ಶೇ. 75 ರಷ್ಟು ಮನೆ ಹಾನಿಗೊಳಗಾದವರಿಗೆ 95 ಸಾವಿರ, ಪೂರ್ತಿ ಹಾನಿಯಾಗಿದ್ದರೆ 1 ಲಕ್ಷದ  1 ಸಾವಿರ ರೂಪಾಯಿ ನೀಡಲಾಗುತ್ತಿದ್ದು, ಒಟ್ಟಾರೇ, ಮಳೆಯಿಂದಾದ ಸಾರ್ವಜನಿಕ ಆಸ್ತಿಪಾಸ್ತಿ ಮೊತ್ತ ಅಂದಾಜು 24. 19 ಕೋಟಿಯಷ್ಟಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!