ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬೆದರಿಸಲು ಹೋಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ರಾಜಗೋಪಾಲ ನಗರದ ಸಮೀಪವಿರುವ ಸಂಜೀವಿನಿ ನಗರದಲ್ಲಿ ನಡೆದಿದೆ.
ಕಾರ್ಮಿಕ ನಾಗರಾಜ್ (38) ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಅವರ ದೇಹವು ಶೇ.80ರಷ್ಟು ಬೆಂಕಿಯಿಂದ ಸುಟ್ಟು ಹೋಗಿದೆ. ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವ್ಯಕ್ತಿ ಇದೀಗ ಜೀವನ್ಮರಣ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಕಾರ್ಮಿಕ ನಾಗರಾಜ್ ಹಾಗೂ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಲಲಿತಾ ಇಬ್ಬರೂ 10 ವರ್ಷಗಳ ಹಿಂದೆ ವಿವಾಹವಾಗಿದ್ದರು. ಕೌಟುಂಬಿಕ ವಿಷಯಗಳಿಗೆ ಸತಿ-ಪತಿ ಮಧ್ಯೆ ಜಗಳವಾಗಿತ್ತು. ಈ ಭಿನ್ನಾಭಿಪ್ರಾಯದಿಂದ ಬೇಸತ್ತ ಲಲಿತಾ ವರ್ಷದಿಂದ ಪತಿಯನ್ನು ತೊರೆದು ಸಂಜೀವಿನ ನಗರದಲ್ಲಿ ಮಗನೊಟ್ಟಿಗೆ ಪ್ರತ್ಯೇಕವಾಗಿ ನೆಲೆಸಿದ್ದರು.
ಬುಧವಾರ ರಾತ್ರಿ ನಾಗರಾಜ್ ನಿನ್ನನ್ನು ಕೊಂದು ನಾನು ಸಹ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಕೆ ಹಾಕಿದ್ದಾನೆ. ಈ ವೇಳೆ ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics