ಬೆಂಗಳೂರು: ಉಪ ಮುಖ್ಯಮಂತ್ರಿ ಹುದ್ದೆ ಅಸಾಂವಿಧಾನಿಕ ಎಂದು ಹೇಳಿ ಹುದ್ದೆಯ ಸಿಂಧುತ್ವದ ಕುರಿತಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದ ಅರ್ಜಿದಾರರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರು. ದಂಡ ವಿಧಿಸಿದೆ.
ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರನ್ನೊಳಗೊಂಡ ಪೀಠ ಪಿಐಎಲ್ ಅನ್ನು ವಜಾಗೊಳಿಸಿ ಅರ್ಜಿದಾರರಿಗೆ ದಂಡ ಹಾಕಿದೆ.
"ಪಿಐಎಲ್ ಗಳನ್ನು ಹೆಚ್ಚಿನ ಸಮಯದಲ್ಲಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ನೈಜ ಕಾರಣಕ್ಕೆ ಅರ್ಜಿ ಸಲ್ಲಿಕೆ ಆಗುತ್ತಿಲ್ಲ " ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.
ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ಅಸಾಂವಿಧಾನಿಕ ಎಂದು ಉಲ್ಲೇಖಿಸಿ ಪುತ್ತೂರು ವಿವೇಕಾನಂದ ಕಾಲೇಜು ಪ್ರಾದ್ಯಾಪಕ ಶೇಖರ್ ಅಯ್ಯರ್ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು.