ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಪರಿಣಾಮ ಮೂವರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕೆಎ 30 ಎ 1194 ನಂಬರಿನ ಸ್ವಿಪ್ಟ್ ಕಾರು ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.
ಮೃತರನ್ನು ಚಾಲಕ ಶಂಭು, ಶ್ರೀನಿವಾಸ್ ಹರಿಕಾಂತ್ ಹಾಗೂ ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ.