ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ, ಆಸ್ಪತ್ರೆ ಸಿಬ್ಬಂದಿಯಿಂದ ಮಕ್ಕಳ ರಕ್ಷಣೆ 
ರಾಜ್ಯ

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ, ಆಸ್ಪತ್ರೆ ಸಿಬ್ಬಂದಿಯಿಂದ ಮಕ್ಕಳ ರಕ್ಷಣೆ

ತುಮಕೂರು ಜಿಲ್ಲಾ ಆಸ್ಪತ್ರೆಯ ನವಜಾತ ಶಿಶು ತೀವ್ರ ನಿಗಾ ಘಟಕ (ಎನ್‌.ಐ. ಸಿ.ಯು) ದಲ್ಲಿ ಇಂದು ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಕಾರಣ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ತುಮಕೂರು: ತುಮಕೂರು ಜಿಲ್ಲಾ ಆಸ್ಪತ್ರೆಯ ನವಜಾತ ಶಿಶು ತೀವ್ರ ನಿಗಾ ಘಟಕ (ಎನ್‌.ಐ. ಸಿ.ಯು) ದಲ್ಲಿ ಇಂದು ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಕಾರಣ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಎನ್‌.ಐ. ಸಿ.ಯು ಘಟಕರ ಹವಾನಿಯಂತ್ರಕದಲ್ಲಿ ಉಂಟಾದ  ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಈ ಅನಾಹುತ ಸಂಭವಿಸಿತ್ತು. ಆದರೆ ಅದೃಷ್ಟವಶಾತ್‌ ಘಟನೆಯಲ್ಲಿ ಯಾವ ಸಾವು ನೋವು ಸಂಭವಿಸಿಲ್ಲ.
ಘಟನಾ ಸ್ಥಳದಲ್ಲಿ ಹಾಜರಿದ್ದ  ಆಸ್ಪತ್ರೆಯ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಮಕ್ಕಳ ಜೀವ ಉಳಿದಿದ್ದು ಒಟ್ಟು 29 ಮಕ್ಕಳನ್ನು ರಕ್ಷಿಸಲಾಗಿದೆ. 
ಎಲ್ಲಾ ಇಪ್ಪತ್ತೊಂಭತ್ತು ಮಕ್ಕಳೂ ಸುರಕ್ಷಿತವಾಗಿದ್ದಾರೆ. ಗರದ ಶ್ರೀದೇವಿ ಮೆಡಿಕಲ್ ಕಾಲೇಜು ಮತ್ತು ಸಿದ್ಧಗಂಗಾ ಆಸ್ಪತ್ರೆಯ ನವಜಾತ ಶಿಶು ತೀವ್ರ ನಿಗಾ ಘಟಕಕ್ಕೆ ಮಕ್ಕಳನ್ನು ಸ್ಥಳಾಂತರಿಸಿ ಆರೈಕೆ ನಡೆಸಲಾಗಿದೆ. ಎಂದು ಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್, ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ.ವೀರಭದ್ರಯ್ಯ ಮಾದ್ಯಮಕ್ಕೆ ವಿವರಿಸಿದ್ದಾರೆ.
ಜಿಲ್ಲಾಧಿಕಾರಿ ಕೆ.ಪಿ ಮೋಹನ್ ರಾಜ್, ಎಸ್ಪಿ ಡಾ. ದಿವ್ಯಗೋಪಿನಾಥ್, ತುಮಕೂರು ಶಾಸಕ ರಫೀಕ್ ಅಹಮದ್ ಘಟನಾ ಸ್ಥಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT