ಛತ್ತೀಸ್ ಘಡ ನಕ್ಸಲ್ ಕಾರ್ಯಾಚರಣೆ ಸಾಂದರ್ಭಿಕ ಚಿತ್ರ 
ರಾಜ್ಯ

ಛತ್ತೀಸ್ ಘಡ ನಕ್ಸಲ್ ಕಾರ್ಯಾಚರಣೆಯಲ್ಲಿ ಕರ್ನಾಟಕದ ಯೋಧ ಸಾವು

ತೆಲಂಗಾಣ ಹಾಗೂ ಛತ್ತೀಸ್ ಘಡ ಗಡಿಯಲ್ಲಿ ಇಂದು (ಗುರುವಾರ) ನಡೆದ ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಕರ್ನಾಟಕದ ಬೀದರ್ ಮೂಲದ ಯೋಧನೊಬ್ಬ ಮೃತಪಟ್ಟಿದ್ದಾರೆ.

ಬೀದರ್: ತೆಲಂಗಾಣ ಹಾಗೂ ಛತ್ತೀಸ್ ಘಡ ಗಡಿಯಲ್ಲಿ ಇಂದು (ಗುರುವಾರ) ನಡೆದ ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಕರ್ನಾಟಕದ ಬೀದರ್ ಮೂಲದ ಯೋಧನೊಬ್ಬ ಮೃತಪಟ್ಟಿದ್ದಾರೆ.
ತೆಲಂಗಾಣ ನಕ್ಸಲ್ ನಿಗ್ರಹ ಪಡೆ ಕಾನ್‌ಸ್ಟೆಬಲ್‌ ಆಗಿದ್ದ ಬೀದರ್‌ನ ಲಾಡಗೇರಿ ಗ್ರೇಸ್‌ ಕಾಲೊನಿಯ ಸುಶೀಲಕುಮಾರ ವಿಲ್ಸನ್ (32) ಇಂದಿನ ಕಾರ್ಯಾಚರಣೆಯಲ್ಲಿ ವೀರಮರಣವನ್ನಪ್ಪಿದ್ದಾರೆ.
2001ರಲ್ಲಿ ತೆಲಂಗಾಣದ ಚಂದಾನಗರ ಪೊಲೀಸ್ ಠಾಣೆಗೆ ಕಾನ್‌ಸ್ಟೆಬಲ್ ಆಗಿ ಸೇರಿದ್ದ ಸುಶೀಲಕುಮಾರ ನಂತರದ ದಿನಗಳಲ್ಲಿ ನಕ್ಸಲ್ ನಿಗ್ರಹ ಪಡೆಗೆ ಸೇರ್ಪಡೆಯಾಗಿದ್ದರು. ಅಲ್ಲಿ ಅವರು ಎರವಲು ಸೇವೆಯ ಅಡಿಯಲ್ಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುತ್ತಿದ್ದರು. 
ಬೀದರ್ ನ ಈ ಯೋಧ ತೆಲಂಗಾಣದ ಅಜ್ಜಿ ಮನೆಯಲ್ಲಿಯೇ ಬೆಳೆದಿದ್ದು ಅಲ್ಲಿಯೇ ಶಿಕ್ಷಣ ಪೂರೈಸಿ ಪೋಲೀಸ್ ಸೇವೆಗೆ ದಾಖಲಾಗಿದ್ದರು. 
ಮೃತ ಯೋಧ  ಪತ್ನಿ, ಮೂರು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. ಇಂದು ರಾತ್ರಿ ಹತ್ತರ ಸುಮಾರಿಗೆ ಯೋಧನ ಪಾರ್ಥಿವ ಶರೀರ ಬೀದರ್ ಗೆ ಆಆಗಮಿಸಲಿದೆ ಎಂದು ತೆಲಂಗಾಣ ಪೋಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!