ಬಳ್ಳಾರಿ: ಕಾಂಗ್ರೆಸ್ ಮುಖಂಡ ಫರ್ಹಾನ್ ಅಹ್ಮದ್ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಬುಧವಾರ ತಮ್ಮಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ರೇಡಿಯಾಲಜಿ ವಿಭಾಗದ ವೈದ್ಯ ವಿನೋದ್ ಹಾಗೂ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಗಾಯತ್ರಿ ಅವರ ಪತಿ, ಡಾ.ವಿನೋದ್ ಅವರು ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿರುವ ಅಹ್ಮದ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿನೋದ್ ಅವರು ಇಂದು ಗಾಂಧಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವೈದ್ಯರನ್ನು ಬೆಂಬಲಿಸಿ ಭಾರತೀಯ ವೈದ್ಯಕೀಯ ಸಂಘ, ರೇಡಿಯಾಲಜಿಸ್ಟರ ಸಂಘ ಮತ್ತು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಪ್ರಮುಖರು ಠಾಣೆಯಲ್ಲಿ ಹಾಜರಿದ್ದರು.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರು, ಹಲ್ಲೆ ಘಟನೆಗೆ ಸಂಬಂಧಿಸಿ ಸಮಗ್ರ ವರದಿ ನೀಡಲು ನಗರ ಉಪ ವಿಭಾಗದ ಡಿವೈಎಸ್ಪಿಗೆ ಸೂಚಿಸಿರುವುದಾಗಿ ಳಿಸಿದ್ದಾರೆ.