ಗೌರಿ ಲಂಕೇಶ್ 
ರಾಜ್ಯ

ಗೌರಿ ಲಂಕೇಶ್ ಹತ್ಯೆ: ಬಂಧಿತ ನವೀನ್ ಕುಮಾರ್ ಎಸ್‏ಐಟಿ ವಶಕ್ಕೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ನವೀನ್ ಕುಮಾರ್ ನನ್ನು ವಿಶೇಷ ತನಿಖಾ ದಳ(ಎಸ್ಐಟಿ) ವಶಕ್ಕೆ ಪಡೆದಿದೆ...

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ನವೀನ್ ಕುಮಾರ್ ನನ್ನು ವಿಶೇಷ ತನಿಖಾ ದಳ(ಎಸ್ಐಟಿ) ವಶಕ್ಕೆ ಪಡೆದಿದೆ. 
ಕಳೆದ ಫೆಬ್ರವರಿ 18ರಂದು ಉಪ್ಪಾರ ಪೇಟೆಯ ಪೊಲೀಸರು ಬಂಧಿಸಿದ್ದರು. ನಂತರ ಸಿಸಿಬಿ ಪೊಲೀಸರು ಫೆಬ್ರವರಿ 19ರಂದು ಹೆಚ್ಚುವರಿ ವಿಚಾರಣೆಗೆ ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದರು. ಬಂಧನ ಅವಧಿ ಇಂದಿಗೆ ಮುಕ್ತಾಯವಾಗಿದ್ದರಿಂದ ಇಂದು ಸಿಸಿಬಿ ಪೊಲೀಸರು ನವೀನ್ ನನ್ನು ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಪೊಲೀಸರು ಪ್ರಕರಣ ಸಂಬಂಧ ಹೆಚ್ಚುವರಿ ವಿಚಾರಣೆಗಾಗಿ ನವೀನ್ ನನ್ನು ನಮ್ಮ ವಶಕ್ಕೆ ನೀಡುವಂತೆ ಕೋರ್ಟ್ ಮುಂದೆ ಮನವಿ ಸಲ್ಲಿಸಿದ್ದು ಎಸ್ಐಟಿ ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಧೀಶರು 7 ದಿನಗಳ ಕಾಲ ವಶಕ್ಕೆ ನೀಡಿದ್ದಾರೆ. 
ಮೊದಲಿನಿಂದಲೂ ಶಂಕಿತ ಆರೋಪಿ ಮೇಲೆ ಕಣ್ಣಿಟ್ಟಿದ್ದ ಎಸ್ ಐಟಿ ಅಧಿಕಾರಿಗಳು ನವೀನ್ ನ ದೂರವಾಣಿ ಕರೆಗಳ ಪರಿಶೀಲನೆ ನಡೆಸಿದ್ದರು. ಈ ವೇಳೆ ಈತ ಗನ್ ಮತ್ತು ಇತರೆ ಸ್ಫೋಟಕ ಮತ್ತು ಶಸ್ತ್ರಾಸ್ತ್ರಗಳ ಕುರಿತು ಮಾತನಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಕಾರಣಕ್ಕೆ ಆರೋಪಿ ನವೀನ್ ಕುಮಾರ್ ಗೂ ಗೌರಿ ಲಂಕೇಶ್ ಹತ್ಯೆಗೂ ಸಂಬಂಧವಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದರು. ಅಲ್ಲದೆ ನವೀನ್ ಕುಮಾರ್ ಗೆ ಸನಾತನ ಸಂಸ್ಥೆ, ಹಿಂದೂ ಯುವ ಸೇನಾದಂತಹ ಕಠಿಣ ಹಿಂದೂಪರ ಸಂಘಟನೆಗಳೊಂದಿಗೆ ಸಂಪರ್ಕವಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ಹಣದುಬ್ಬರ ಶೇ.5.2; ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್? ಆಹಾರ, ಇಂಧನ ಬೆಲೆ ಏರಿಕೆ!

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ