ಮೊಹಮ್ಮದ್ ಹ್ಯಾರಿಸ್ ನಲಪಾಡ್ 
ರಾಜ್ಯ

ವಿದ್ವತ್ ಮೇಲೆ ಹಲ್ಲೆ: ಜಾಮೀನು ಅರ್ಜಿ ವಜಾ, ಮೊಹಮ್ಮದ್ ನಲಪಾಡ್‍ಗೆ ಜೈಲೇ ಗತಿ!

ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಶಾಸಕ ಎನ್ಎ ಹ್ಯಾರಿಸ್ ಪುತ್ರ ಎ1 ಆರೋಪಿ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು...

ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ಶಾಸಕ ಎನ್ಎ ಹ್ಯಾರಿಸ್ ಪುತ್ರ ಎ1 ಆರೋಪಿ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ವಜಾ ಮಾಡಿದ್ದಾರೆ. 
ಪ್ರಕರಣ ಸಂಬಂಧ 63ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆದಿತ್ತು. ವಿದ್ವತ್ ಪರ ವಕೀಲ ಶ್ಯಾಮ್ ಸುಂದರ್ ಅವರು ನಲಪಾಡ್ ಗೆ ಜಾಮೀನು ನೀಡದಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ನಲಪಾಡ್ ವಕೀಲ ಟಾಮಿ ಸೆಬಾಸ್ಟಿಯನ್ ಜಾಮೀನು ನೀಡುವಂತೆ ನ್ಯಾಯಧೀಶರಲ್ಲಿ ಮನವಿ ಮಾಡಿದರು. ಇನ್ನು ವಾದ-ವಿವಾದ ಆಲಿಸಿದ್ದ ನ್ಯಾಯಾಧೀಶರು ಆದೇಶವನ್ನು ಇಂದಿಗೆ ಮುಂದೂಡಿದ್ದರು. 
ಇಂದು ನ್ಯಾಯಾಧೀಶರು ಆದೇಶವನ್ನು ಪ್ರಕಟಿಸಿದ್ದು ಮೊಹಮ್ಮದ್ ನಲಪಾಡ್ ಸೇರಿದಂತೆ ಇತರ 6 ಮಂದಿ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ. ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಇದೊಂದು ಗಂಭೀರ ಪ್ರಕರಣವಾಗಿದೆ. ಹಲ್ಲೆ ನಂತರ ಆರೋಪಿಗಳು ಆಸ್ಪತ್ರೆಯವರೆಗೂ ಹೋಗಿ ಅಲ್ಲಿ ದಾಂದಲೆ ನಡೆಸಿರುವುದು ಗಂಭೀರ ವಿಚಾರವಾಗಿದೆ. ಇದನ್ನೆಲ್ಲಾ ಮನಗಂಡು ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷ್ಯ ನಾಶ ಮಾಡುವ ಸಂಭವ ಇರುವುದರಿಂದ ಆರೋಪಿಗಳಿಗೆ ಜಾಮೀನು ನಿರಾಕರಣೆ ಮಾಡಿರುವುದಾಗಿ ನ್ಯಾಯಾಧೀಶರು ತಿಳಿಸಿದ್ದಾರೆ. 
ಇಂದು ಜಾಮೀನು ಸಿಗುತ್ತದೆ ಎಂದು ಆಶಯದಲ್ಲಿದ್ದ ಮೊಹಮ್ಮದ್ ನಲಪಾಡ್ ಜೈಲು ಅಧೀಕ್ಷಕರ ಕೊಠಡಿಯಲ್ಲಿ ಕುಳಿತು ಟಿವಿಯಲ್ಲಿ ನೋಡಿದ್ದು ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಕುಸಿದು ಬಿದ್ದಿದ್ದಾನೆ. ನಂತರ ಜೈಲು ಸಿಬ್ಬಂದಿಗಳು ಆತನಿಗೆ ನೀರು ಕುಡಿಸಿದ್ದಾರೆ. ಬಳಿಕ ಆತ ನನ್ನ ಹಣೆ ಬರಹ ಸರಿಯಿಲ್ಲ ಎಂದುಕೊಂಡು ಜೈಲು ಕೋಣೆಗೆ ತೆರಳಿದ್ದಾನೆ. 
ಕಳೆದ ಫೆಬ್ರವರಿ 17ರಂದು ರಾತ್ರಿ ಯುಬಿ ಸಿಟಿ ಕಟ್ಟಡದ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಗಂಭೀರ ಹಲ್ಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಲಪಾಡ್ ಸೇರಿದಂತೆ 7 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT