ಈ ವರ್ಷ ಲಾಭದಲ್ಲಿ ಕೆಎಸ್ಆರ್ ಟಿಸಿ!
ಕಳೆದ ವರ್ಷ ಫೆಬ್ರವರಿಯವರೆಗೆ 138.50 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಘೋಷಿಸಿದ್ದ ....
ಬೆಂಗಳೂರು: ಕಳೆದ ವರ್ಷ ಫೆಬ್ರವರಿಯವರೆಗೆ 138.50 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಘೋಷಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಈ ವರ್ಷ ಲಾಭದಲ್ಲಿದೆ. ಈ ವರ್ಷ ಫೆಬ್ರವರಿಯವರೆಗೆ 10.29 ಕೋಟಿ ರೂಪಾಯಿ ಲಾಭ ಮಾಡಿರುವ ಕೆಎಸ್ ಆರ್ ಟಿಸಿ ಈ ವರ್ಷಾಂತ್ಯಕ್ಕೆ 5 ಕೋಟಿ ರೂಪಾಯಿ ಹೆಚ್ಚು ಲಾಭ ಮಾಡಿಕೊಳ್ಳುವ ನಿರೀಕ್ಷೆಯಿದೆ.
ನಿರ್ವಹಣೆ ವೆಚ್ಚ ಅಧಿಕವಾದರೂ ಕೂಡ ಈ ವರ್ಷ ಕೆಎಸ್ಆರ್ ಟಿಸಿ ಲಾಭ ಮಾಡಿಕೊಂಡಿದೆ ಎಂದು ಕೆಎಸ್ಆರ್ ಟಿಸಿ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ತಿಳಿಸಿದ್ದಾರೆ. ಕೆಎಸ್ಆರ್ ಟಿಸಿ 2015-16ರಲ್ಲಿ 50.95 ಕೋಟಿ ರೂಪಾಯಿ ಲಾಭ ಮಾಡಿಕೊಂಡಿದೆ ಎಂದು ಘೋಷಿಸಿಕೊಂಡಿತ್ತು. ಆದರೆ ಕಳೆದ ವರ್ಷ ನಿಗಮಕ್ಕೆ 177 ಕೋಟಿ ರೂಪಾಯಿ ನಷ್ಟವಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.