ಹುಬ್ಬಳ್ಳಿ: ತ್ರಿಪುರಾ, ಮೇಘಾಲಯ, ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ರಾಜಕೀಯ ಬೇರೆಯಾಗಿದೆ ಎಂದರು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬ್ಯಾಲೆಟ್ ಕಾಗದ ಬಳಕೆ ಮಾಡಬೇಕೆಂದು ಒತ್ತಾಯಿಸಿದರು.ವಿದ್ಯುನ್ಮಾನ ಮತಯಂತ್ರಗಳಲ್ಲಿ ನಂಬಿಕೆ ಇದೆ. ಆದರೆ, ರಾಜ್ಯದಲ್ಲಿ ನಡೆಯಲಿರುವ ಆಸೆಂಬ್ಲಿ ಚುನಾವಣೆಯಲ್ಲಿ ಬ್ಯಾಲೆಟ್ ಕಾಗದ ಬಳಸಬೇಕೆಂದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು.
ತ್ರಿಪುರಾ, ಮೇಘಾಲಯ, ನಾಗಲ್ಯಾಂಡ್ ಚುನಾವಣಾ ಫಲಿತಾಂಶದಿಂದ ಈ ರೀತಿ ಹೇಳುತ್ತಿಲ್ಲ ಅನೇಕ ರಾಷ್ಟ್ರಗಳು ಸಾಂಪ್ರದಾಯಿಕ ಚುನಾವಣಾ ವ್ಯವಸ್ಥೆಗೆ ಮರಳಿವೆ. ಆದ್ದರಿಂದ ಬ್ಯಾಲೆಟ್ ವ್ಯವಸ್ಥೆಗೆ ಮರಳುವುದಕ್ಕೆ ಇದು ಸೂಕ್ತ ಕಾಲವಾಗಿದೆ ಎಂದು ಅಭಿಪ್ರಾಯಪಟ್ಟರು.