ಸಾಂದರ್ಭಿಕ ಚಿತ್ರ 
ರಾಜ್ಯ

ಜೀವನದಲ್ಲಿ ಜಿಗುಪ್ಸೆ: ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ರಿವಾಲ್ವರ್‍ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ರಿವಾಲ್ವರ್‍ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ಉತ್ತರ ಪ್ರದೇಶದ ಅನಿಲ್ ಔಜಾ (54) ಆತ್ಮಹತ್ಯೆಗೆ ಶರಣಾದ ದುರ್ದೈವಿ.

 ನಗರದ ಪಾಪಯ್ಯ ಲೇ ಔಟ್‍ನ ಹೈಲೆಟ್ ಅಪಾರ್ಟ್‍ಮೆಂಟ್‍ನಲ್ಲಿ ಅನಿಲ್ ಔಜಾ ವಾಸವಾಗಿದ್ದರು. ಕಾರು ಸರ್ವೀಸ್ ಸ್ಟೇಷನ್ ಹೊಂದಿದ್ದ ಇವರು ಆಟೋ ಮೊಬೈಲ್ ಬ್ಯುಸಿನೆಸ್ ಮಾಡುತ್ತಿದ್ದರು.

ಪತ್ನಿ ವಿಚ್ಛೇದನ ನೀಡಿದ್ದರಿಂದ ಅನಿಲ್ ಔಜಾ ಅವರು ಒಬ್ಬರೇ ವಾಸವಾಗಿದ್ದರು. ಒಂಟಿತನದಿಂದ ನೊಂದಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ.

 ರಾತ್ರಿ 9 ರಿಂದ 9.30ರ ಸಮಯದಲ್ಲಿ ಲೈಸೆನ್ಸ್ ಹೊಂದಿದ್ದ ರಿವಾಲ್ವರ್‍ನಿಂದ ತಲೆಗೆ ಗುಂಡು ಹಾರಿಸಿಕೊಂಡು ಅನಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿನ ಶಬ್ದ ಕೇಳಿ ನೆರೆಹೊರೆಯ ನಿವಾಸಿಗಳು ಇವರ ಮನೆಯ ಬಳಿ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದು ,ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಶವವನ್ನು ಅಂಬೇಡ್ಕರ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ