ರಾಜ್ಯ

ಲೋಕಾಯುಕ್ತರ ಮೇಲೆ ಚಾಕು ಇರಿತ: ಬಿಜೆಪಿ ನಾಯಕರ ಖಂಡನೆ

Raghavendra Adiga
ಬೆಂಗಳೂರು: ಲೋಕಾಯುಕ್ತ ವಿಶ್ವನಾಥ ಶೆಟ್ಟಿಗೆ ಚಾಕು ಇರಿತ ಪ್ರಕರಣ ಸಂಬಂಧ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸೇರಿ ಬಿಜೆಪಿ ಹಲವು ನಾಯಕರು  ಖಂಡನೆ ವ್ಯಕ್ತಪಡಿಸಿದ್ದಾರೆ.
"ಬೆಂಗಳೂರು ಲೋಕಾಯುಕ್ತ ಕಛೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಮೇಲೆ ಚಾಕು ಇರಿತದ ಪ್ರಕರಣ ಕಾನೂನು ಸುವ್ಯವಸ್ಥೆಯ ಗಂಭೀರ ಸಮಸ್ಯೆಗೆ ಸಾಕ್ಷಿಯಾಗಿದೆ." ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಕೇಂದ್ರದಲ್ಲಿ ಸಂಸದರಾಗಿರುವ ಅನಂತ ಕುಮಾರ್, ರಾಜ್ಯ ವಿರೋಧ ಪಕ್ಷದ ನಾಯಕರುಗಳಾದ ಶೋಭಾ ಕರಂದ್ಲಾಜೆ ಸಹ ಲೋಕಾಯುಕ್ತ ಅಧಿಕಾರಿಗಳ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ.
"ಹಾಡಹಗಲೇ ಲೋಕಾಯುಕ್ತರ ಮೇಲೆ ಹಲ್ಲೆ ನಡೆದಿರುವುದು ದುರದೃಷ್ಟಕರ, ಇದು ರಾಜ್ಯದಲ್ಲಿ ಕ್ಷೀಣಿಸುತ್ತಿರುವ ಕಾನೂನು ಸುವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ. ಇದಕ್ಕೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ನೇರ ಹೊಣೆ" ಎಂದು ಸಂಸದ ಅನಂತ್ ಕುಮಾರ್ ಹೇಳಿದ್ದಾರೆ.
"ಕಾಂಗ್ರೆಸ್ ಸರ್ಕಾರ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಿದೆ. ಈ ಸರ್ಕಾರದ ಆಡಳಿತದ ಅವಧಿಯಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕರ್ನಾಟಕವಿಂದು ಗಂಭೀರವಾದ ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಿಸುತ್ತಿದೆ ಎಂದರೆ ಇದಕ್ಕೆ ಸಿದ್ದರಾಮಯ್ಯ ಸರ್ಕಾರವೇ ಕಾರಣ. ಅಪರಾಧಿಗಳ ವಿರುದ್ಧ ಸರ್ಕಾರ ಯಾವ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ್" ಎಂದು ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
SCROLL FOR NEXT