ಬೆಂಗಳೂರು: 2019-20 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ 16 ವಸತಿ ಶಾಲೆಗಳು ಕಾರ್ಯಾರಂಭ ಮಾಡಲಿವೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಬೆಂಗಳೂರು ಸೆಂಟ್ರಲ್ ಕಾಲೇಜು ಕ್ಯಾಂಪಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಾನವ ಸಂಪನ್ಮೂಲ ಇಲಾಖೆಯ ಇತ್ತೀಚಿನ ಸಮೀಕ್ಷೆ ಪ್ರಕಾರ, ಇತರ ರಾಜ್ಯಗಳಿಗೆ ಹೋಲಿಸಿದರೇ ರಾಜ್ಯದಲ್ಲಿ ಉನ್ನತ ಶಿಕ್ಷಣದ ದಾಖಲಾತಿ ಪ್ರಮಾಣ ಕಡಿಮೆಯಿದೆ. ಹೀಗಾಗಿ 16 ವಸತಿ ಸಹಿತ ಕಾಲೇಜು ಆರಂಭಿಸಲು ನಿರ್ಧರಿಸಿದೆ.
ಬೆಂಗಳೂರು ಸೆಂಟ್ರಲ್ ಯೂನಿವರ್ಸಿಟಿ ಪ್ರೊ, ಜಾಫೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರು, ವಿವಿಯ ಮೂಲಭೂತ ಸೌಕರ್ಯ ಅಭಿವೃದ್ದಿಗೆ 1 ಸಾವಿರಕೋಟಿ ರು. ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದೆ, ವಿವಿ ವಿಸ್ತರಣೆಗೆ 40 ರಿಂದ 50 ಎಕರೆ ಭೂಮಿ ನೀಡುವಂತೆ ಕೋರಿದ್ದರು,ಇದನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ.
ಇದೇ ವೇಳೆ ಮಾತನಾಡಿದ ಸಾಹಿತಿ ಪ್ರೊ. ನಿಸಾರ್ ಆಹ್ಮದ್, ಎಚ್.ಎಂ ರೇವಣ್ಣ ಮತ್ತು ಸಚಿವ ಎ ಮಂಜು ನನ್ನ ವಿದ್ಯಾರ್ಥಿಗಳು, ಇವರಿಗೆ ನಾನು ಸೆಂಟ್ರಲ್ ಕಾಲೇಜಿನಲ್ಲಿ ಪಾಠ ಮಾಡಿದ್ದೆ, ರೇವಣ್ಣ ನನ್ನ ತರಗತಿಗೆ ಹಾಜರಾಗುತ್ತಿರಲಿಲ್ಲ, ಹೀಗಾಗಿ ನನ್ನ ಜೊತೆ ಕುಳಿತು ಕೊಳ್ಳಲು ಅವರಿಗೆ ಹಕ್ಕಿಲ್ಲ ಎಂದು ಹೇಳಿದರು.